ಬಂಟ್ವಾಳ: ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ತಹಶಿಲ್ದಾರರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Date:

ಬಂಟ್ವಾಳ ತಾಲ್ಲೂಕಿನೆಲ್ಲೆಡೆ ಬೀದಿ ನಾಯಿಗಳಿಂದ ಸಾರ್ವಜನಿಕರು ಧಾಳಿಗೊಳಗಾಗುತ್ತಿದ್ದು, ಈ ಕುರಿತಂತೆ ತಾಲೂಕಿನ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕ್ರಮ ಅಗತ್ಯವಾಗಿದೆ. ಶಾಲೆಗೆ ಹಾಗೂ ಮದರಸಕ್ಕೆ ಹೋಗುವ ಮಕ್ಕಳು ಹಾಗೂ ಹಿರಿಯ ನಾಗರಿಕರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆಯೂ, ಸಾರ್ವಜನಿಕರಿಗೆ ಗರಿಷ್ಟ ಭದ್ರತೆ ಒದಗಿಸುವಂತೆಯೂ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ನೇತೃತ್ವದ ನಿಯೋಗದಿಂದ ತಹಶೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

ನಿಯೋಗದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಉಪಾಧ್ಯಕ್ಷ ಇಕ್ಬಾಲ್ ಇಝಾನ್, ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ಹಾಗೂ ಬಿ ಸಿ ರೋಡ್ ಸಿಟಿ ಕೌನ್ಸಿಲ್ ಅಧ್ಯಕ್ಷರಾದ ಬಶೀರ್ ಪಲ್ಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...