ಮಂಗಳೂರು: ಮಂಗಳೂರು ವಕೀಲರ ಸಂಘದ ವತಿಯಿಂದ ಸಂಘದ ಎಲ್ಲಾ ಕಾರ್ಯಕ್ರಮಗಳಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಿರುವ ಹೈಕೋರ್ಟ್ ವಕೀಲರಾದ ಕಮಲುದ್ದೀನ್ ಅಹಮದ್ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ, ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಜೊತೆ ಕಾರ್ಯದರ್ಶಿ ಶ್ರೀಮತಿ ಜ್ಯೋತಿ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಕಮೀಟಿ ಸದಸ್ಯರಾದ ಪ್ರವೀಣ್ ಕುಮಾರ್ ಅದ್ಯಪಾಡಿ , ರವಿಕುಮಾರ್ ವಿ,ಮಹಮ್ಮದ್ ಅಸ್ಗರ್ ಉಪಸ್ಥಿತರಿದ್ದರು.





