
ಉಳ್ಳಾಲ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ಹಾಗೂ ಕೆ ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ@500 ಉಪನ್ಯಾಸ – 49 ಕಾರ್ಯಕ್ರಮವು ನಡೆಯಿತು.
ಉಳ್ಳಾಲ ರಾಣಿ ಅಬ್ಬಕ್ಕ ಅವರ ಜನ್ಮದಿನದ 500 ರ ವಾರ್ಷಿಕೋತ್ಸವದ ಸಂಭ್ರಮಕ್ಕಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳಿಗೆ ರಾಣಿ ಅಬ್ಬಕ್ಕನ ಬಗ್ಗೆ ಇರುವಂತಹ ಕಿರು ಚಿತ್ರವನ್ನು (AI) ತೋರಿಸಲಾಯಿತು.
ಕಾರ್ಯಕ್ರಮವನ್ನು ಪಾಂಡ್ಯರಾಜ್ ಬಲ್ಲಾಳ್ ಸಂಸ್ಥೆಗಳ ಆಡಳಿತ ಪ್ರತಿನಿಧಿ ಆದಂತಹ ಶ್ರೀ ಇಶಾನ್ ಬಲ್ಲಾಳ್ ರವರು ಉದ್ಘಾಟಿಸಿದರು. ಹಾಗೂ KRMSS ನಾ ರಾಜ್ಯ ಜಂಟಿ ಕಾರ್ಯದರ್ಶಿಗಳಾದ ಡಾ. ಮಾಧವ್ ಎಂ.ಕೆ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಬಿ.ಎ ಲೋಕಯ್ಯ ಶಿಶಿಲ ರವರು ಉಳ್ಳಾಲ ರಾಣಿ ಅಬ್ಬಕ್ಕನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಟ್ಟರು.