ಯುಎನ್‌ನಲ್ಲಿ ಸ್ವತಂತ್ರ ಫೆಲೆಸ್ತೀನ್ ನಿರ್ಣಯ; ಭಾರತದ ನಿಲುವು ಮಾನವೀಯ: ಗ್ರ್ಯಾಂಡ್ ಮುಫ್ತಿ

Date:

ಪಶ್ಚಿಮ ಏಷ್ಯಾದಲ್ಲಿ ಯುದ್ಧ ಹರಡುವ ಕ್ರಮವನ್ನು ಸಮರ್ಥಿಸಲಾಗದು

ಕೋಝಿಕ್ಕೋಡ್: ಫೆಲೆಸ್ತೀನ್-ಇಸ್ರೇಲ್ ದ್ವಿರಾಷ್ಟ್ರ ಪರಿಹಾರವನ್ನು ಸೂಚಿಸುವ ಯುಎನ್ ಸಾಮಾನ್ಯ ಸಭೆಯ ನಿರ್ಣಯವನ್ನು ಬೆಂಬಲಿಸಿದ ಭಾರತದ ನಿಲುವು ಶ್ಲಾಘನೀಯವಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಹೇಳಿದರು. ಪ್ರವಾದಿ ಜನ್ಮದಿನಾಚರಣೆಯ ಅಂಗವಾಗಿ ಮರ್ಕಝ್ ಆಶ್ರಯದಲ್ಲಿ ಕೋಝಿಕ್ಕೋಡ್‌ನಲ್ಲಿ ನಡೆದ ಅಂತರಾಷ್ಟ್ರೀಯ ಮೀಲಾದ್ ಸಮ್ಮೇಳನದಲ್ಲಿ ಅವರು ಮುಖ್ಯ ಭಾಷಣ ಮಾಡುತ್ತಿದ್ದರು.

ಯುದ್ಧದ ಸಂಕಷ್ಟದಲ್ಲಿ ಎಲ್ಲವನ್ನೂ ಕಳೆದುಕೊಂಡ ಜನರೊಂದಿಗೆ ನಿಲ್ಲಲು ಇಡೀ ಜಗತ್ತು ಮುಂದೆ ಬರಬೇಕು. ಗಾಝಾ ಜೊತೆಗೆ ಕತಾರ್, ಯೆಮೆನ್ ಮತ್ತು ಲೆಬನಾನ್ ಸೇರಿದಂತೆ ಪಶ್ಚಿಮ ಏಷ್ಯಾದ ದೇಶಗಳಲ್ಲಿ ಅಶಾಂತಿಯನ್ನು ಹರಡುತ್ತಿರುವ ಇಸ್ರೇಲ್‌ನ ಕ್ರಮವನ್ನು ಎಂದಿಗೂ ಸಮರ್ಥಿಸಲಾಗದು. ಲಕ್ಷಾಂತರ ವಲಸಿಗರು ಕೆಲಸ ಮಾಡುವ ಈ ವಲಯದಲ್ಲಿನ ಅಸ್ಥಿರತೆಯನ್ನು ಪರಿಗಣಿಸಿ, ಶಾಂತಿಯನ್ನು ಪುನಃಸ್ಥಾಪಿಸಲು ಸರ್ಕಾರವು ಮುಂದಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ಭಾರತಕ್ಕಿರುವ ಪ್ರಭಾವವು ಶಾಂತಿ ಪ್ರಯತ್ನಗಳನ್ನು ತ್ವರಿತಗೊಳಿಸುತ್ತದೆ ಎಂದು ಗ್ರ್ಯಾಂಡ್ ಮುಫ್ತಿ ಹೇಳಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...