ಹಿರಿಯ ಉದ್ಯಮಿ, ಎ. ಕೆ.ಸುಂದರ ಸಾಲ್ಯಾನ್ ಇನ್ನಿಲ್ಲ

Date:

ಬಂಟ್ವಾಳ :ಇಲ್ಲಿನ ಅರಳ ಗ್ರಾಮದ ಎರ್ಮಾಳ್ ಸಮೀಪದ ಕಂಡದೊಟ್ಟು ನಿವಾಸಿ, ಹಿರಿಯ ಉದ್ಯಮಿ ಎ. ಕೆ. ಸುಂದರ ಸಾಲ್ಯಾನ್ (79) ಇವರು ಆಸೌಖ್ಯದಿಂದ ಬೆಂಗಳೂರು ಸ್ವಗೃಹದಲ್ಲಿ ಭಾನುವಾರ ಬೆಳಿಗ್ಗೆ ನಿಧನರಾದರು.ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಸಹೋದರರು ಮತ್ತು ಸಹೋದರಿ ಇದ್ದಾರೆ.

ಬೆಂಗಳೂರಿನಲ್ಲಿ ಕಳೆದ 45 ವರ್ಷಗಳಿಂದ ‘ಮಂಗಳಾ ಆರ್ಟ್ ಪ್ರಿಂಟರ್ಸ್ ‘ ಮುದ್ರಣ ಸಂಸ್ಥೆ ಮುನ್ನಡೆಸುತ್ತಿದ್ದು, ಬಂಟ್ವಾಳ ತಾಲೂಕು ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನ, ಅತ್ತಾವರ ಶ್ರೀ ಉಮಾಮಹೇಶ್ವರ ದೇವಸ್ಥಾನ, ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ರಸರ ಕ್ಷೇತ್ರ, ಕಾರ್ಕಳ ಬಜಗೋಳಿ  ಶ್ರೀ ಆದಿಶಕ್ತಿ ಧರ್ಮದೇವಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಮಹತ್ತರ ಕೊಡುಗೆ ಸಲ್ಲಿಸಿದ್ದರು.  ‘ಸುಮಂಗಲಾ’ ಸ್ಮರಣ ಸಂಚಿಕೆ,  ‘ಸಫಲ ತ್ರೈಮಾಸಿಕ ಪತ್ರಿಕೆ’ ಸಹಿತ ವಿವಿಧ ಸಾರ್ವಜನಿಕ ಶ್ರೀ ಗಣೇಶೋತ್ಸವ ಮತ್ತು ಶಾರದೋತ್ಸವ ಕಾರ್ಯಕ್ರಮಕ್ಕೆ ಉಚಿತ ಆಮಂತ್ರಣ ಪತ್ರಿಕೆ ಮುದ್ರಿಸಿ,  ಕೊಡುಗೈ ದಾನಿಯಾಗಿ, ಸರಳ, ಸಜ್ಜನಿಕೆಯಿಂದಲೇ ಎಲ್ಲರ ನೆಚ್ಚಿನ ‘ಸುಂದರಣ್ಣ’ ಎಂದೇ ಗುರುತಿಸಿಕೊಂಡಿದ್ದರು.ಮೃತರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ಸ್ವಗೃಹ ಬಳಿ ನೇರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ: ಆರ್ ಎಸ್ ಎಸ್ ಮುಖಂಡ ಡಾ. ಕೆ. ಪ್ರಭಾಕರ ಭಟ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ. ರಮಾನಾಥ ರೈ,  ಅಖಿಲ ಕರ್ನಾಟಕ ಗಾಣಿಗ ಸಂಘದ ಅಧ್ಯಕ್ಷ ಎಂ. ಆರ್. ರಾಜಶೇಖರ್, ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...