ಮೇಲ್ತೆನೆಯಿಂದ ಬ್ಯಾರಿ ಭಾಷಾ ದಿನಾಚರಣೆ

Date:

ದೇರಳಕಟ್ಟೆ, ಅ.3: ಬ್ಯಾರಿ ಎಲ್ತ್‌ಕಾರ್-ಕಲಾವಿದಮಾರೊ ಕೂಟ (ಮೇಲ್ತೆನೆ) ಇದರ ವತಿಯಿಂದ ಬ್ಯಾರಿ ಭಾಷಾ ದಿನವನ್ನು ನಾಟೆಕಲ್‌ನಲ್ಲಿರುವ ಎಲೈಟ್ ಟ್ಯೂಶನ್ ಸೆಂಟರ್‌ನಲ್ಲಿ ಶುಕ್ರವಾರ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಆಧುನಿಕ ಭರಾಟೆಯ ಮಧ್ಯೆಯೂ ಜನಸಾಮಾನ್ಯರ ದಿನಬಳಕೆಯ ಆಡುಮಾತುಗಳಿಂದ ಈವತ್ತು ಪ್ರಾದೇಶಿಕ ಭಾಷೆಗಳು ಉಳಿಯಲು ಸಾಧ್ಯವಾಗಿದೆ. ಉನ್ನತ ಶಿಕ್ಷಣ ಪಡೆದ ಹೆಚ್ಚಿನವರಲ್ಲಿ ಆಂಗ್ಲ ಭಾಷೆಯ ಮೇಲೆ ವ್ಯಾಮೋಹ ಹೆಚ್ಚಿದೆ. ಆದರೆ ಕೂಲಿ ಕಾರ್ಮಿಕರು, ಸಣ್ಣಪುಟ್ಟ ಕೆಲಸ ಮಾಡುವವರು ಮಾತೃಭಾಷೆಯಲ್ಲೇ ದಿನನಿತ್ಯ ವ್ಯವಹರಿಸುತ್ತಾರೆ. ಹಾಗಾಗಿ ಭಾಷಾ ದಿನಾಚರಣೆಯ ಸಂದರ್ಭ ಅಂತಹವರನ್ನು ಗುರುತಿಸಿ ಗೌರವಿಸುವ ಪ್ರಯತ್ನ ಆಗಬೇಕಿದೆ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್‌ ಭಾಷೆಯ ಬೆಳವಣಿಗೆಯಲ್ಲಿ ತಾಯಂದಿರ ಪಾತ್ರ ಅಪಾರವಿದೆ. ತಾಯಿಯಿಂದಲೇ ಮಕ್ಕಳು ಮಾತೃಭಾಷೆಯನ್ನು ಕಲಿಯುತ್ತಾರೆ. ಹಾಗಾಗಿ ತಾಯಂದಿರಿಲ್ಲದ ಭಾಷಾ ದಿನಾಚರಣೆಯು ಅರ್ಥಪೂರ್ಣವಾಗದು. ಮುಂದಿನ ದಿನಗಳಲ್ಲಿ ಎಲ್ಲಾ ಬ್ಯಾರಿ ಸಂಘಟನೆಗಳು ತಾಯಂದಿರನ್ನು ಒಳಗೊಂಡಂತೆ ಕಾರ್ಯಕ್ರಮಗಳು ಆಯೋಜಿಸಲು ಕ್ರಮ ವಹಿಸಬೇಕು ಎಂದು ಅಭಿಪ್ರಾಯಪಟ್ಟರು. ಮೇಲ್ತೆನೆಯ ಅಧ್ಯಕ್ಷ ವಿ. ಇಬ್ರಾಹಿಂ ನಡುಪದವು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯರಾದ ಇಬ್ರಾಹಿಂ ರಫೀಕ್ ಮುದುಂಗಾರುಕಟ್ಟೆ, ರಫೀಕ್ ಕಲ್ಕಟ್ಟ ಪಾಲ್ಗೊಂಡಿದ್ದರು.ಕೋಶಾಧಿಕಾರಿ ಮನ್ಸೂರ್ ಅಹ್ಮದ್ ಸಾಮಣಿಗೆ ಸ್ವಾಗತಿಸಿದರು. ಮಾಜಿ ಅಧ್ಯಕ್ಷರಾದ ಟಿ. ಇಸ್ಮಾಯಿಲ್ ಮಾಸ್ಟರ್ ವಂದಿಸಿದರು. ಬಶೀರ್ ಕಲ್ಕಟ್ಟ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...