ಎಂಬಿಎ ಅಧ್ಯಯನ ಕೌಶಲ್ಯ ಮತ್ತು ಅವಕಾಶಗಳ ಸಂಗಮ: ಐವಾನ್ ಡಿಸೋಜ

Date:

ಮಂಗಳೂರು: ಎಂಬಿಎ ಅಧ್ಯಯನ ಕೌಶಲ್ಯ ಮತ್ತು ಅವಕಾಶಗಳ ಸಂಗಮ. ಇದು ನಾಯಕತ್ವ ಗುಣ, ಆಡಳಿತಾತ್ಮಕ ಕೌಶಲ್ಯ ಸಾಧಿಸಲು ಪೂರಕ, ಎಂದು ಕರ್ನಾಟಕ ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿದ್ದಾರೆ.

ಇತ್ತೀಚೆಗೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಎಂಬಿಎ (ಐಬಿ) ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯ ಕಾಲೇಜಿನ ಎಂಬಿಎ ವಿಭಾಗಕ್ಕೆ ದಾಖಲಾದ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಧ್ಯಾ ಕಾರ್ಯಕ್ರಮ ಎಂಬಿಎ ವಿಭಾಗದ ಸಲಹೆಗಾರ ಪ್ರೊ. ಜಯವಂತ ನಾಯಕ್ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಎಂಬಿಎ ಕಾರ್ಯಕ್ರಮವನ್ನು ಪ್ರಾರಂಭಿಸುವಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿಶೇಷ ಮುತುವರ್ಜಿ ವಹಿಸಿದ್ದರು, ಎಂದು ಅವರ ಕೊಡುಗೆಯನ್ನು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ, ವಿದ್ಯಾರ್ಥಿಗಳು ತಮಗೆ ಲಭಿಸಿದ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ ಅಗಾಧ ಸಾಧನೆಯನ್ನು ಮಾಡಬಹುದು ಎಂದರು. ಇದೇ ವೇಳೆ, ವಾರಂಗಲ್ ನಲ್ಲಿ ನಡೆಯಲಿರುವ ಖೇಲೋ ಇಂಡಿಯಾ ರಾಷ್ಟ್ರಮಟ್ಟದ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಎಂಬಿಎ ವಿಭಾಗದ ವಿದ್ಯಾರ್ಥಿ ಕು. ನಿಶಾಲ್ ಡೆಲ್ಫಿನ್ ಡಿಸೋಜರನ್ನು ಸನ್ಮಾನಿಸಲಾಯಿತು. ಕುಮಾರಿ ಅರ್ಲಿನ್ ಶಾಲ್ಮ ಫೆರ್ನಾಂಡಿಸ್ ಅತಿಥಿಗಳನ್ನು ಸ್ವಾಗತಿಸಿದರು. ಮಹಮದ್ ಶೌಹಾನ್ ವಂದಿಸಿದರು. ಕಾರ್ಯಕ್ರಮವನ್ನು ಕುಮಾರಿ ಶರಣ್ಯ ನಿರೂಪಿಸಿದರು. ವಿಭಾಗದ ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...