ಸಾಹಿತ್ಯದಿಂದ ಪಡೆದ ಹಣವನ್ನು ಸಮಾಜಕ್ಕೆ ಹಿಂತಿರುಗಿಸಿದ ಕೀತಿ೯ ಭೈರಪ್ಪನವರಿಗೆ ಸಲ್ಲುತ್ತದೆ

Date:

ಮೂಡುಬಿದಿರೆ: ಕನ್ನಡ ಸಾರಸ್ವತ ಲೋಕದಲ್ಲಿ ಅತ್ಯಂತ ಹೆಚ್ಚು ರಾಯಧನ(ರಾಯಲ್ಟಿ) ಪಡೆಯುತ್ತಿದ್ದವರು ಎಸ್.ಎಲ್. ಭೈರಪ್ಪನವರು. ಸಾಹಿತ್ಯದಿಂದ ಪಡೆದ ಹಣವನ್ನು ಸಂಪೂರ್ಣವಾಗಿ ಸಮಾಜಕ್ಕೆ ಹಿಂದಿರುಗಿಸಿದ ಕೀರ್ತಿಯು ಭೈರಪ್ಪರವರಿಗೆ ಸಲ್ಲುತ್ತದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ್ ಭಟ್ ಹೇಳಿದರು.

ಅವರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕನ್ನಡ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ಘಟಕದ ಸಹಯೋಗದಲ್ಲಿ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ನಡೆದ ನುಡಿನಮನ ಕರ‍್ಯಕ್ರಮದಲ್ಲಿ ಡಾ. ಎಸ್ ಎಲ್ ಭೈರಪ್ಪರವರ ವ್ಯಕ್ತಿತ್ವ ಮತ್ತು ಬರಹಗಳಲ್ಲಿನ ಜೀವನ ಮೌಲ್ಯಗಳ ಕುರಿತು ಮಾತನಾಡಿದರು.
ಅವರ ಕಾದಂಬರಿಗಳಲ್ಲಿ ದೇಶ ಪ್ರೇಮ, ಪರಿಸರ ಪ್ರೇಮ, ಪ್ರಾಣಿ ದಯೆ, ಸ್ನೇಹ, ಕಾಳಜಿ, ಜೀವನಾನುಭವ ಅಡಕವಾಗಿದ್ದವು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಕೆ., ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಜೀವನ್ ರಾಮ್ ಸುಳ್ಯ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಕಾಯ೯ಕ್ರಮ ನಿರೂಪಿಸಿದರು. ಪ್ರನುಷ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...