ಕನಾ೯ಟಕ ಅನುದಾನ ರಹಿತ ಪ. ಪೂ. ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ದ. ಕ ಜಿಲ್ಲಾ ಘಟಕದ ಅಧ್ಯಕ್ಷ ರಾಗಿ ಯುವರಾಜ್ ಜೈನ್ ಅಧಿಕಾರ

Date:

ಮಂಗಳೂರು: ನೂತನವಾಗಿ ರಚನೆಯಾಗಿರುವ ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ (KUPMA) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.ಕಳೆದ ಒಂದುವರೆ ದಶಕಗಳಿಂದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ನೂರಾರು ಕುಟುಂಬಗಳಿಗೆ ಉದ್ಯೋಗವನ್ನು ಒದಗಿಸಿರುವ ಯುವರಾಜ್ ಜೈನ್ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವಾ ಚಿಂತನೆಗಳಿಗೆ ರಾಷ್ಟ್ರಪತಿಯವರು ಈ ಹಿಂದೆ ಭೈರಾದೇವಿ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.ಯುವರಾಜ್ ಜೈನ್ ಮತ್ತು ದಕ್ಷಿಣ ಕನ್ನಡ ಘಟಕದ ನೂತನ ಪದಾಧಿಕಾರಿಗಳು ಅಕ್ಟೋಬರ್ 19 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ‘ದಿ ಓಷನ್ ಪರ್ಲ್’ ಸಭಾಂಗಣದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ಐ. ಭೋಜೆಗೌಡ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...