ಪೋಲಿಸರ ಅಮಾನತಿಗೆ ಒತ್ತಾಯ
ಪುತ್ತೂರು: ನಗರದಲ್ಲಿ ರಿಕ್ಷಾ ಚಾಲಕನ ಮೇಲೆ ಪುತ್ತೂರು ಸಂಚಾರಿ ಠಾಣಾ ಪೋಲೀಸರಿಬ್ಬರು ಕ್ಷುಲ್ಲಕ ಕಾರಣಕ್ಕಾಗಿ ರಿಕ್ಷಾವನ್ನು ಅಡ್ಡಗಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿದ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್ ತೀವ್ರವಾಗಿ ಖಂಡಿಸಿ, ತಪ್ಪಿತಸ್ಥರಾದ ಇಬ್ಬರು ಸಂಚಾರಿ ಪೋಲೀಸರನ್ನು ತಕ್ಷಣ ಅಮಾನತು ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು
ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ಆಸಿಫ್ ಮುಕ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



