ಅಕ್ಟೋಬರ್ 24,25 & 26ರಂದು ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್-2025

Date:

ಉಳ್ಳಾಲ: ಕಡಲಂಚಿನ ಸಂಸ್ಥೆಯಾದ ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆ (ರಿ.) ಉಳ್ಳಾಲ್ ಬೈಲ್, ತೊಕ್ಕೊಟ್ಟು ಹಾಗೂ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮತ್ತು ದಕ್ಷಿಣ ಕನ್ನಡ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಇವರ ಸಹಕಾರದೊಂದಿಗೆ ಇದೇ ಬರುವ ಅಕ್ಟೋಬರ್ 24,25 ಮತ್ತು 26ರಂದು ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್-2025 ಉಳ್ಳಾಲ ಅಂಬಿಕಾರೋಡ್ ಗಟ್ಟಿ ಸಮಾಜದಲ್ಲಿ ನಡೆಯಲಿದೆ ಎಂದು ರಾಜ್ಯ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2025ರ ಅಧ್ಯಕ್ಷ ಜೀತೇಂದ್ರ ಶೆಟ್ಟಿ ತಲಪಾಡಿಗುತ್ತು ಹೇಳಿದರು.

ಉಳ್ಳಾಲ ಪ್ರಸ್‌ಕ್ಲಬ್‌ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಿ.ಶೇಖರ್ ಬಂಗೇರ ಮುಂದಾಳತ್ವದಲ್ಲಿ ಹಲವು ಆಸಕ್ತ ಕ್ರೀಡಾ ಪ್ರೋತ್ಸಾಹಕರೊಂದಿಗೆ ಗ್ರಾಮೀಣ ಪ್ರದೇಶದಲ್ಲಿ 1976ಆರಂಭಗೊAಡು ತೊಕ್ಕೊಟ್ಟು ಪರಿಸರದ ಯುವಕರಿಗೆ ವ್ಯಾಯಾಮಾದ ಮೂಲಕ ಅವರ ದೇಹ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿ ನೀಡಿ ಗ್ರಾಮೀಣ ಕ್ರೀಡೆಗಳಾದ ಕಬ್ಬಡ್ಡಿ,ಕುಸ್ತಿ,ಹಗ್ಗಜಗ್ಗಾಟ ದೇಹದಾಢ್ಯ ಮತ್ತು ಪವರ್ ಲಿಫ್ಟಿಂಗ್ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ಇತಿಹಾಸ ಈ ಸಂಸ್ಥೆಗೆ ಇದೆ. ಇದು ಮೂರನೇ ಬಾರಿಗೆ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯನ್ನು ಏರ್ಪಡಿಸಿದ್ದು, ನಂತರ ಒಂದು ಬಾರಿ ಅಂತರ್ ರಾಜ್ಯಮಟ್ಟದ ಹಗ್ಗಜಗ್ಗಾಟ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಈಗ ಹೊಸ ಯುವಕರಿಗೆ ಪ್ರೇರೆಪಣೆ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.ಸ್ಪರ್ಧಾಕೂಟದಲ್ಲಿ 1600 ಕ್ರೀಡಾಪಟುಗಳು ಭಾಗಿಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.

ಅ.24ರಂದು ಪೂರ್ವಹ್ನ 9:30ಕ್ಕೆ ದ.ಕ.ಜಿಲ್ಲೆಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಸ್ಪರ್ಧಾಕೂಟ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಅ.26ರಂದು ನಡೆಯುವ ಸಮಾರಂಭ ಸಮರೋಪದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಬೆಚ್ ಪ್ರೆಸ್ ಚಾಂಪಿಯನ್ ಶಿಪ್ 2025 ಸಂಸ್ಥೆಯ ಗೌರವಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್ ವಹಿಸಲಿದ್ದಾರೆ. ಗೌರವ ಆತಿಥಿಗಳಾಗಿ ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಗಣ್ಯತೀಗಣ್ಯರು ಭಾಗಿಯಾಗಲಿದ್ದಾರೆ. ಅಂತರಾಷ್ಟಿçÃಯ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಳುಗಳಿಗೆ ಮತ್ತು ತೀರ್ಪುಗಾರರನ್ನು ಅಭಿನಂದಿಸಲಾಗುವುದು. ಕ್ರೀಡಾಪಟುಗಳಿ ಉಪಹಾರ, ಊಟದ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.
ಎಂದರು.

ಇದೇ ವೇಳೆ ಕರ್ನಾಟಕ ಪವರ್ ಲಿಫ್ಟಿಂಗ್ ಆಸೋಸಿಯೇಶನ್ ಖಜಾಂಜಿ ಜಯರಾಂ ಎಂ ಮಾತನಾಡಿ, ಸುಮಾರು 50ವರ್ಷದಿಂದ ಪವರ್ ಲಿಫ್ಟಿಂಗ್ ನಡೆಸಿಕೊಂಡು ಬಂದು ಯಶಸ್ವಿಯಾದ ಕೀರ್ತಿ ಈ ಸಂಸ್ಥೆಗೆ ಸಲ್ಲುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2025ರ ಗೌರವಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ದಕ್ಷಿಣ ಕನ್ನಡ ಪವರ್ ಲಿಫ್ಟಿಂಗ್ ಅಶೋಸಿಯೇಶನ್ ಅಧ್ಯಕ್ಷ ಉಮೇಶ್ ಗಟ್ಟಿ, ಉಳ್ಳಾಲಬೈಲ್ ಶ್ರೀ ಶಕ್ತಿ ವ್ಯಾಯಾಮ ಶಾಲೆ(ರಿ.) ಅಧ್ಯಕ್ಷ ಹರೀಶ್ ಬೈಲ್, ರಾಜ್ಯ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2025ರ ಉಪಾಧ್ಯಕ್ಷ ವಿನೋದ್ ದುಬಯಿ, ರಾಜ್ಯ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2025ರ ಉಪಾಧ್ಯಕ್ಷ ಸುದೇಶ್ ಮರೋಳಿ, ರಾಜ್ಯ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2025ರ ಪ್ರಧಾನ ಕಾರ್ಯದರ್ಶಿ ಜಗದೀಶ್ ಸುಲಯ, ರಾಜ್ಯ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2025ರ ಪ್ರಧಾನ ಸಂಚಾಲಕ ಹೇಮಚಂದ್ರ ಬಬ್ಬುಕಟ್ಟೆ, ದಕ್ಷಿಣ ಕನ್ನಡ ಜಿಲ್ಲಾ ಪವರ್ ಲಿಫ್ಟಿಂಗ್ ಸೋಸಿಯೇಶನ್ ಕಾರ್ಯದರ್ಶಿ ಮಧುಚಂದ್ರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...