ಮೂಡುಬಿದಿರೆ ಪುರಸಭೆ ಆಡಳಿತ ಅವಧಿ ವಿಸ್ತರಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಲು ಬಿಜೆಪಿ ಸಿದ್ಧತೆ

Date:

ಮೂಡುಬಿದಿರೆ: ಇಲ್ಲಿನ ಪುರಸಭೆಯ ಆಡಳಿತ ಅವಧಿಯನ್ನು ವಿಸ್ತರಿಸುವಂತೆ ಕೋರಿ ಬಿಜೆಪಿ ಸದಸ್ಯರು ಹೈಕೋರ್ಟ್ ಮೆಟ್ಟಲೇರಲು ಸಿದ್ಧತೆ ನಡೆಸಿದ್ದಾರೆ.

2024 ಆಗಸ್ಟ್ ತಿಂಗಳಲ್ಲಿ ನಡೆದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಜಯಶ್ರೀ ಕೇಶವ ಅಧ್ಯಕ್ಷರಾಗಿ ಹಾಗೂ ನಾಗರಾಜ ಪೂಜಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅ. 15ರಂದು ಪುರಸಭೆಯ ಮಾಸಿಕ ಸಭೆ ನಡೆದಿದ್ದು ಇದು ಈಗಿನ ಆಡಳಿತದ ಕಡೇ ಮಾಸಿಕ ಸಭೆ ಎನ್ನಲಾಗಿದ್ದುನ. 7ಕ್ಕೆ ಐದು ವಷ೯ದ ಅವಧಿ ಪೂಣ೯ಗೊಳ್ಳಲಿದೆ.ಎರಡುವರೆ ವರ್ಷದ ಅಧಿಕಾರವಧಿಯಲ್ಲಿ ಇದುವರೆಗೆ ಇವರಿಗೆ ಸಿಕ್ಕಿದ ಆಡಳಿತದ ಅವಧಿ ಒಂದು ವರ್ಷ ಒಂದು ತಿಂಗಳು ಮಾತ್ರ ಎನ್ನಲಾಗಿದೆ. ಮೊದಲ ಅವಧಿಯ ಅಧ್ಯಕ್ಷರಾಗಿದ್ದ ಪ್ರಸಾದ್ ಕುಮಾರ್ ಅವರ ಆಡಳಿತ ಅವಧಿ ಮುಗಿದ ನಂತರ ಸರಕಾರ ಸುಮಾರು ಒಂದೂವರೆ ವರ್ಷ ಚುನಾವಣೆ ನಡೆಸದೆ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಅನುಕೂಲವಾಗುವಂತೆ ನಮಗೆ ಎರಡೂವರೆ ವರ್ಷ ಅವಧಿ ಪೂರ್ಣಗೊಳ್ಳುವವರೆಗೆ ಅಧಿಕಾರವಧಿಯನ್ನು ವಿಸ್ತರಿಸಬೇಕೆಂದು ಕೋರಿ ಇಲ್ಲಿನ ಪುರಸಭೆ ಬಿಜೆಪಿ ಸದಸ್ಯರ ಪರವಾಗಿ ಅಧ್ಯಕ್ಷೆ ಜಯಶ್ರೀ ಕೇಶವ ಮತ್ತು ಉಪಾಧ್ಯಕ್ಷ ನಾಗರಾಜ ಪೂಜಾರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿರುವುದಾಗಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...