ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆ.

Date:

ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಇದರ ನೂತನ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು
ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಕಿಶೋರ್ ಡಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾದರು.


ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ ಮತ್ತು ತಾರಾನಾಥ ಶೆಟ್ಟಿ ಬೋಳಾರ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷಣ್ ಕುಮಾರ್ ಮಲ್ಲೂರ್, ಕೋಶಾಧಿಕಾರಿಯಾಗಿ ಮೋಹನ ಕೊಪ್ಪಲ ಕದ್ರಿ, ಕ್ಷೇಮನಿಧಿ ಪ್ರಧಾನಸಂಚಾಲಕರಾಗಿ ಪ್ರದೀಪ್ ಆಳ್ವ ಕದ್ರಿ, ಕ್ಷೇಮನಿಧಿ ಸಂಚಾಲಕರಾಗಿ ರಾಘವೇಂದ್ರ ರಾವ್ ಶರವು, ಜೊತೆ ಕಾರ್ಯದರ್ಶಿ ತುಳಸೀ ದಾಸ್ ಉರ್ವ, ಸಲಹಾ ಸಮಿತಿ ಸದಸ್ಯರಾಗಿ ತಮ್ಮ ಲಕ್ಷ್ಮ್ಮಣ್ , ಶೋಭಾಶೆಟ್ಟಿ, ಶರತ್ ಶೆಟ್ಟಿ ಮುಂಡ್ಕೂರು, ಸಂಘಟನಾ ಕಾರ್ಯದರ್ಶಿಯಾಗಿ ಮಧು ಬಂಗೇರ, ಪ್ರಚಾರ ನಿರ್ದೇಶಕರಾಗಿ ರತ್ನದೇವ್ ಪುಂಜಾಲಕಟ್ಟೆ, ಆಡಳಿತ ಸಮಿತಿ ಸದಸ್ಯರಾಗಿ ಕಿಶೋರ್ ಕುಮಾರ್ ಜೋಗಿ ಉಬಾರ್, ಕಿಶೋರ್ ಡಿ.ಕೆ., ಸುಧಾಕರ ಶೆಟ್ಟಿ ಬೆದ್ರ, ಸಂಜೀವ ಅಡ್ಯಾರ್, ನಾಗೇಶ್ ದೇವಾಡಿಗ ಕದ್ರಿ, ಮೋಹನ್ ಕೆ. ಬೋಳಾರ್, ಅಶ್ವಿನಿ ರೈ, ಕಿಶನ್ ಮಂಗಳಾದೇವಿ, ಹರೀಶ್ ಕೆ. ಶಕ್ತಿನಗರ, ಮನೋಜ್ ಕುಮಾರ್, ನರೇಂದ್ರ ಎಸ್. ಅಂಚನ್, ಸುರೇಶ್ ಬಲ್ಮಠ, ಉದಯರವಿ ಶೆಟ್ಟಿ, ರಾಜಶೇಖರ ಶೆಟ್ಟಿ, ನಿತಿನ್ ಕುಮಾರ್ ಕನೀರ್ತೋಟ, ವಿನಾಯಕ ಜೆಪ್ಪು, ದಿನೇಶ್ ಕುಂಪಲ, ನರೇಂದ್ರ ಕೆರೆಕಾಡು, ತಾರಾನಾಥ್ ಉರ್ವ, ರಂಜನ್ ಬೋಳೂರು ಆಯ್ಕೆಯಾದರು. ಮೋಹನ ಕೊಪ್ಪಲ ಕದ್ರಿ ಕಾರ್ಯಕ್ರಮ ನಿರ್ವಹಿಸಿದರು. ಪ್ರದೀಪ್ ಆಳ್ವ ಕದ್ರಿ ವಂದಿಸಿದರು.ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕುಮಾರ್ ಮಲ್ಲೂರು ಸ್ವಾಗತಿಸಿ, ವಾರ್ಷಿಕ ವರದಿ, ಲೆಕ್ಕಪತ್ರ ಮಂಡಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...