ಜೆ.ಎಮ್.ಇಸ್ಮಾಯಿಲ್ ನಾಪತ್ತೆ15 ವರ್ಷ ಗಳ ಬಳಿಕ ದೂರು ದಾಖಲು

Date:

ಉಳ್ಳಾಲ: ಕೋಟೆಕಾರು ಪ.ಪಂ. ವ್ಯಾಪ್ತಿಯ ದೇರಳ ಕಟ್ಟೆ ಪನೀರ್ ನಿವಾಸಿ ಜೆ.ಎಮ್.ಇಸ್ಮಾಯಿಲ್ (68) ರವರು 15 ವರ್ಷ ಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆ ಆಗಿದ್ದು, ಈ ಬಗ್ಗೆ ಅವರ ಪುತ್ರ ಶಫೀಕುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಮನೆ ಬಿಟ್ಟು ಹೋದರೆ 6 ತಿಂಗಳಿಗೊಮ್ಮೆ ಅಥವಾ 1 ವರ್ಷಕ್ಕೊಮ್ಮೆ ಹಿಂದಿರುಗಿ ಮನೆಗೆ ಬರುತ್ತಿದ್ದರು .ಆದರೆ ಅವರು 2010 ಫೆಬ್ರುವರಿ 08 ರಂದು ಮನೆ ಬಿಟ್ಟು ಹೋದವರು ವಾಪಸ್ ಮನೆಗೆ ಬಾರದೆ ಕಳೆದ 15 ವರ್ಷದಿಂದ ನಾಪತ್ತೆ ಆಗಿದ್ದಾರೆ. ಅವರನ್ನು ನಾವು ಮತ್ತು ಸಂಬಂದಿಕರು ಸೇರಿಕೊಂಡು ಕೇರಳ, ತಮಿಳುನಾಡು, ಆಂಧ್ರ ಸಹಿತ ವಿವಿಧ ಕಡೆಗಳಲ್ಲಿ ಸಂಚರಿಸಿ ಪತ್ತೆಗೆ ಪ್ರಯತ್ನಿ ಸಿದರೂ ಅವರು ಪತ್ತೆಯಾಗಿರುವುದಿಲ್ಲ. ತನ್ನ ತಂದೆಯನ್ನು ಪತ್ತೆ ಮಾಡಿಕೊಡಬೇಕು ಎಂದು ಅವರ ಪುತ್ರ ಶಫೀಕುದ್ದೀನ್ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...