ಸಜಿಪಮೂಡ ಗ್ರಾಮ ಪಂಚಾಯತ್‌ನಲ್ಲಿ ನೀರಿನ ಬಿಲ್ 9 ಲಕ್ಷಕ್ಕಿಂತ ಹೆಚ್ಚಿನ ಹಣ ದುರುಪಯೋಗದ ಆರೋಪ – ತನಿಖೆಗೆ ಬೇಡಿಕೆ

Date:

ಬಂಟ್ವಾಳ: ಸಜಿಪಮೂಡ ಗ್ರಾಮ ಪಂಚಾಯತ್‌ನಲ್ಲಿ 2023–24 ಹಾಗೂ 2024–25ನೇ ಸಾಲಿನ ನೀರಿನ ಬಿಲ್ ವಸೂಲಾತಿ ಕಾರ್ಯದಲ್ಲಿ ಗಂಭೀರ ಅಕ್ರಮ ನಡೆದಿರುವುದಾಗಿ ಸ್ಥಳೀಯ ಮೂಲಗಳಿಂದ ಮಾಹಿತಿ ಲಭಿಸಿದೆ.

ಗ್ರಾಮ ಪಂಚಾಯತ್‌ನ ಸಿಬ್ಬಂದಿ ಲಾವನ್ಯಾ ಅವರು ಸಾರ್ವಜನಿಕರಿಂದ ನೀರಿನ ಬಿಲ್ ಹಣವನ್ನು ಸಂಗ್ರಹಿಸಿ, ರಶೀದಿ ನೀಡದೆ ಅದರ ಸಂಪೂರ್ಣ ಮೊತ್ತವನ್ನು ಪಂಚಾಯತ್ ಖಾತೆಗೆ ಜಮಾ ಮಾಡದೇ, ಸುಮಾರು 9 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತವನ್ನು ಅನಿಯಮಿತವಾಗಿ ಬಳಸಿರುವುದಾಗಿ ಆರೋಪಗಳು ಕೇಳಿ ಬರುತ್ತಿವೆ.ಈ ವಿಷಯದಲ್ಲಿ ಕೆಲವು ಪಂಚಾಯತ್ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಭಾಗಿತ್ವವೂ ಇದ್ದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.ಸಾರ್ವಜನಿಕರ ಹಣದ ದುರುಪಯೋಗದ ಈ ಆರೋಪದ ಹಿನ್ನೆಲೆಯಲ್ಲಿ, ಸಂಪೂರ್ಣ ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ಸತ್ಯಾವಸ್ಥೆ ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯ ನಾಗರಿಕರ ಆಗ್ರಹವಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...