ಮೂಡುಬಿದಿರೆ ತಾಲೂಕು ಮಟ್ಟದ ಕ್ರೀಡಾಕೂಟ: ಆಳ್ವಾಸ್ ಚಾಂಪಿಯನ್- 139 ಪದಕಗಳ ಸಾಧನೆ

Date:

ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್‌ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2025-26ನೇ ಸಾಲಿನ ಕ್ರೀಡಾಕೂಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಗಳು ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ.

ಆಳ್ವಾಸ್ ಶಾಲೆಗಳು 14 ವರ್ಷ ಮತ್ತು 17 ವರ್ಷ ವಯೋಮಿತಿಯ ಎರಡೂ ವಿಭಾಗಗಳಲ್ಲಿ (ಬಾಲಕರು ಮತ್ತು ಬಾಲಕಿಯರು) ಪ್ರಾಬಲ್ಯ ಮೆರೆದು ಸಮಗ್ರ ಪ್ರಶಸ್ತಿಯನ್ನು ಗೆದ್ದಿದೆ. ಆಳ್ವಾಸ್ ವಿದ್ಯಾರ್ಥಿಗಳು ಒಟ್ಟು 58 ಚಿನ್ನ, 50 ಬೆಳ್ಳಿ ಮತ್ತು 31 ಕಂಚು ಪದಕಗಳನ್ನು ಗಳಿಸುವ ಮೂಲಕ ಒಟ್ಟಾರೆ 139 ಪದಕಗಳ ಸಾಧನೆ ಮಾಡಿದ್ದಾರೆ.ಎರಡು ದಿನಗಳಹ ನಡೆದ ಈ ಕ್ರೀಡಾಕೂಟದ ಸಮಾರೋಪ ಸಮಾರಂಭವು ಬುಧವಾರ ಸಂಜೆ ನಡೆಯಿತು.

ಆತಿಥೇಯ ಪ್ರಾಂತ್ಯ ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷರಾದ ಜಿತೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ವಿನಯ ಕುಮಾರ್, ಗ್ರೇಡ್ 1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಚಂದ್ರ ಅಂಬೂರಿ, ಗ್ರೇಡ್ 2 ಸಂಘದ ಅಧ್ಯಕ್ಷೆ ವಿನ್ನಿಫ್ರೆಡ್ ಗ್ರೇಸಿ ಪಿಂಟೋ, ಪ್ರಾಂತ್ಯ, ಶಾಲೆಯ ಮುಖ್ಯ ಶಿಕ್ಷಕ ಸುಧಾಕರ ಸಾಲ್ಯಾನ್, ಎಸ್‌ಡಿಎಂಸಿ ಅಧ್ಯಕ್ಷ ಭಾಸ್ಕರ್, ನಿವೃತ್ತ ದೈ.ಶಿ.ಶಿ. ಜಗದೀಶ ಅಜ್ರಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಡಾ. ರಾಮಕೃಷ್ಣ ಶಿರೂರು, ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ದೊರೆಸ್ವಾಮಿ ಕೆ.ಎನ್., ಗೌರಮ್ಮ ಗೋವರ್ಧನ ಹೊಸ್ಮನಿ , ದೈಹಿಕ ಶಿಕ್ಷಣ ಪರಿವೀಕ್ಷಕ ನವೀನ್ ಆರ್. ಪುತ್ರನ್ ಮತ್ತು ಆತಿಥೇಯ ಪ್ರೌಢಶಾಲಾ ಮುಖ್ಯ ರಾಮಚಂದ್ರ ನಾಯಕ್ ಉಪಸ್ಥಿತರಿದ್ದರು.ಶಾಲಾ ದೈಹಿಕ ಶಿಕ್ಷಕ ನವೀನ್ ಚಂದ್ರ ಅಂಬೂರಿ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...