ಕಲ್ಲಬೆಟ್ಟು ಮೊರಾಜಿ೯ ದೇಸಾಯಿ ವಸತಿ ಶಾಲೆ “ಶೂನ್ಯ ತ್ಯಾಜ್ಯ ಕ್ಯಾಂಪಸ್”: ಪುರಸಭೆಯಿಂದ ಅಭಿನಂದನೆ

Date:

ಮೂಡುಬಿದಿರೆ : ತ್ಯಾಜ್ಯ ನಿರ್ವಹಣೆಯಲ್ಲಿ ಸಂಸ್ಥೆಯು ಸಾಧಿಸಿರುವ ಗಮನಾರ್ಹ ಸಾಧನೆಯನ್ನು ಗುರುತಿಸಿ ಕಲ್ಲಬೆಟ್ಟುವಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಮೂಡುಬಿದಿರೆ ಪುರಸಭೆಯು `ಶೂನ್ಯ ತ್ಯಾಜ್ಯ ಕ್ಯಾಂಪಸ್’ ಎಂದು ಅಧಿಕೃತವಾಗಿ ಮಂಗಳವಾರ ಘೋಷಿಸಿ ಕಾರ್ಯಾಲಯದಲ್ಲಿ ಸಂಸ್ಥೆಯನ್ನು ಅಭಿನಂದಿಸಿತು.

ಪ್ರಾಂಶುಪಾಲ ಸಂಗಣ್ಣ ಬಸಯ್ಯ ಹಿರೇಮಠ್, ಕಲಾ ಶಿಕ್ಷಕ ವಿವೇಕ್ ಪಡಿಯಾರ್, ವಾರ್ಡನ್ ಸರಿತಾ ಹಾಗೂ ಪಾಲಕರ ಸಂಘದ ಅಧ್ಯಕ್ಷ ಗಣೇಶ್ ಅವರನ್ನು ಅಭಿನಂದನಾ ಪತ್ರದೊಂದಿಗೆ ಗೌರವಿಸಲಾಯಿತು. ಈ ಮೊದಲು ಶೂನ್ಯ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ಹೊಂದಿರುವ ಜೈನ ಪ್ರೌಢಶಾಲೆ, ಮಹಮ್ಮದೀಯ ಮತ್ತು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯನ್ನು ಈ ಹಿಂದೆಗುರುತಿಸಿ ಗೌರವಿಸಲಾಗಿದೆ.

ಇದೀಗ ನಾಲ್ಕನೇ “ಶೂನ್ಯ ತ್ಯಾಜ್ಯ ಕ್ಯಾಂಪಸ್” ಆಗಿ ಮೊರಾಜಿ೯ ದೇಸಾಯಿ ವಸತಿ ಶಾಲೆಯನ್ನು ಗೌರವಿಸಲಾಯಿತು. ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಸ್ವಾತಿ ಪ್ರಭು, ವಾರ್ಡ್ ಸದಸ್ಯ ಜೊಸ್ಸಿ ಮೆನೇಜಸ್ ಮುಖ್ಯಾಧಿಕಾರಿ ಇಂದು ಎಂ., ಪರಿಸರ ಅಭಿಯಂತರೆ ಶಿಲ್ಪಾ ಎಸ್., ಆರೋಗ್ಯ ಅಧಿಕಾರಿ ಶಶಿರೇಖಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...