ಮೂಡುಬಿದಿರೆ ಕಾಳಿಕಾಂಬಾ ಮಹಿಳಾ ಸಮಿತಿ ರಜತ ಸಂಭ್ರಮ

Date:

ಮೂಡುಬಿದಿರೆ: ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿಯ ರಜತ ಸಂಭ್ರಮ ಕಾರ್ಯಕ್ರಮವು ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಮಂಗಳವಾರ ಭಜನಾ ಸೇವೆಯೊಂದಿಗೆ ಪ್ರಾರಂಭಗೊಂಡಿತು. ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಹಾಗೂ ಎಸ್‌ಕೆಎಫ್ ಎಲಿಕ್ಸರ್ ಇಂಡಿಯ ಪ್ರೈ. ಲಿ.ನ ಆಡಳಿತ ನಿರ್ದೇಶಕ ಜಿ. ರಾಮಕೃಷ್ಣ ಆಚಾರ್ಯ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ದೇವಾಲಯದ ಕಟ್ಟಡ ನಿರ್ಮಿಸುವುದು ಮುಖ್ಯವಲ್ಲ. ಅಲ್ಲಿ ಮಾನವ ಸಂಪನ್ಮೂಲವನ್ನು ಅಭಿವೃದ್ಧಿ ಪಡಿಸುವ ಕೆಲಸವಾಗಬೇಕು. ಸಂಸ್ಕೃತಿ ಸಂಸ್ಕಾರವನ್ನು ಬೆಳೆಸುವ ಕೇಂದ್ರವಾಗಬೇಕು. ಮಹಿಳಾ ಮಂಡಳಿಯು ಮಹಿಳೆಯರನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆಯನ್ನು ಕೈಗೊಂಡಾಗ ಸಮಾಜ ಆರ್ಥಿಕವಾಗಿ ಸಧೃಡವಾಗಿರಲು ಸಾಧ್ಯ ಎಂದರು. ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ಉಳಿಯ ಶುಭ ಹಾರೈಸಿದರು.

ಕ್ಷೇತ್ರದ ಮೊಕ್ತೇಸರ ಶಿವರಾಮ ಆಚಾರ್ಯ, ಯೋಗೀಶ ಆಚಾರ್ಯ, ಕಾಳಿಕಾಂಬಾ ಸೇವಾ ಸಮಿತಿಯ ಅಧ್ಯಕ್ಷ ಶ್ರೀನಾಥ ಆಚಾರ್ಯ, ಕ್ಷೇತ್ರದ ಪ್ರಧಾನ ಅರ್ಚಕ ವಿಘ್ನೇಶ್ವರ ಪುರೋಹಿತ ಉಪಸ್ಥಿತರಿದ್ದರು.ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷ ಶಾಂತಲಾ ಸೀತಾರಾಮ ಆಚಾರ್ಯ ಸ್ವಾಗತಿಸಿ ಅತಿಥಿಗಳನ್ನು ಗೌರವಿಸಿದರು. ಕಾರ್ಯದರ್ಶಿ ರಶ್ಮಿತಾ ಅರವಿಂದ ಆಚಾರ್ಯ ವಂದಿಸಿ ಕಾರ್ಯಕ್ರಮ ನಿರ್ವಹಿಸಿದರು, ಅವಿಭಜಿತ ದ.ಕ ಜಿಲ್ಲೆಯ ೧೨ ಮಹಿಳಾ ಮಂಡಳಿಗಳಿಂದ ಭಜನಾ ಸೇವೆ ನಡೆಯಿತು.

ಚಿತ್ರ : ೦೪ ಎಂಡಿಬಿ ಕಾಳಿಕಾಂಬಾ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...