ಮಂಗಳೂರು ವಿ.ವಿ: ಡಾ.ದಿವಾಕರ್ ಅವರ ಕೃತಿ ಬಿಡುಗಡೆ

Date:

ಕೊಣಾಜೆ: ಮಂಗಳೂರು ವಿವಿ ಜೀವವಿಜ್ಞಾನ ವಿಭಾಗದ ಉಪನ್ಯಾಸಕರಾದ‌ ಡಾ. ದಿವಾಕರ್ ಎಂ. ಎಸ್. ಅವರ ಇಂಡಿಯನ್ ಡಯಾಬಿಟಿಸ್ ಕಿಚನ್ – ಟ್ರೆಡಿಷನಲ್ ಫುಡ್ ಫಾರ್ ಗುಡ್ ಹೆಲ್ತ್ “Indian Diabetes Kitchen – Traditional Foods for Good Health” ಎಂಬ ಕೃತಿಯನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಶುಕ್ರವಾರ ಬಿಡುಗಡೆಗೊಳಿಸಿದರು.

ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, “ಡಾ. ದಿವಾಕರ್ ಅವರ ಕೃತಿಯು ಭಾರತೀಯ ಪಾರಂಪರಿಕ ಆಹಾರದ ವೈಜ್ಞಾನಿಕ ಅಂಶಗಳನ್ನು ಜನರಿಗೆ ಸರಳವಾಗಿ ಪರಿಚಯಿಸುವ ಮಹತ್ವದ ಪ್ರಯತ್ನವಾಗಿದೆ. ಇಂತಹ ಪುಸ್ತಕಗಳು ಆಹಾರ ವಿಜ್ಞಾನ ಮತ್ತು ಪೌಷ್ಠಿಕಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತವೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ರಾಜು ಮೊಗವೀರ ಕೆ ಅವರು ಮಾತನಾಡಿ, ಈ ಕೃತಿಯು ಸಂಶೋಧನೆ ಮತ್ತು ಆರೋಗ್ಯಕರ ಜೀವನ ಶೈಲಿಯ ಕಡೆಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತದೆ ಎಂದು ಶ್ಲಾಘಿಸಿದರು.ಪ್ರಾಧ್ಯಾಪಕ ಪ್ರೊ. ರಾಜು ಕೃಷ್ಣ ಸಿ.ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆಹಾರ ವಿಜ್ಞಾನ ಮತ್ತು ಪೌಷ್ಠಿಕಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ವಿಶ್ವವಿದ್ಯಾಲಯದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...