ಕನಕರ ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಿ- ಡಾ. ಎಸ್ಸೆನ್ವಿ

Date:

ಮೂಡುಬಿದಿರೆ: ಕಲ್ಲಬೆಟ್ಟುವನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ ಸಂತ ಕನಕದಾಸರ ಜಯಂತಿಯನ್ನು ಶನಿವಾರ ಆಚರಿಸಲಾಯಿತು. ಕಾಲೇಜಿನ ಟ್ರಸ್ಟಿ ಹಾಗೂ ಪ್ರಾಂಶುಪಾಲರಾದ ಡಾ. ಎಸ್. ಎನ್. ವೆಂಕಟೇಶ್ ನಾಯಕ್ ರವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ೧೬ ನೇ ಶತಮಾನದಲ್ಲಿ ನಮ್ಮ ಸಮಾಜದಲ್ಲಿದ್ದ ಅಸಮಾನತೆ ಮತ್ತು ಜಾತಿ ತಾರತಮ್ಯವನ್ನು ಹೋಗಲಾಡಿಸಲು ಶ್ರಮಿಸಿದವರು ಸಂತ ಕನಕದಾಸರು. ತಮ್ಮ ಕಾವ್ಯ ಮತ್ತು ಕೀರ್ತನೆಗಳ ಮೂಲಕ ಹರಿದಾಸ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಲ್ಲದೇ ಸಮಾಜದ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕಿ ಸಮ ಸಮಾಜದ ನಿರ್ಮಾಣ ಮಾಡುವುದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಎಂದು ಹೇಳಿದರು.

ಕನಕದಾಸರ ತತ್ವ ಚಿಂತನೆ ಮತ್ತು ಸಾಮಾಜಿಕ ಪ್ರಜ್ಞೆಯನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಈ ಸಮಾಜದಲ್ಲಿ ಜೀವನ ನಡೆಸಬೇಕು ಎಂದು ಹೇಳಿದರು. ದಾರ್ಶನಿಕ ವ್ಯಕ್ತಿಗಳ ಜಯಂತಿಯನ್ನು ಆಚರಿಸುವುದರೊಂದಿಗೆ ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಮತ್ತು ಸಾಧನೆಯನ್ನು ಎಲ್ಲರೂ ತಿಳಿದುಕೊಳ್ಳುವುದು ಅವಶ್ಯಕ ಎಂದು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಕಾಲೇಜಿನ ಟ್ರಸ್ಟಿಗಳಾದ ಮೆಹಬೂಬ್ ಬಾಷಾ, ಚಂದ್ರಶೇಖರ ರಾಜೇ ಅರಸ್, ಯೋಗೇಶ್ ಬೆಡೆಕರ್, ಸುಭಾಷ್ ಝಾ, ಡಾ. ಶರತ್ ಗೋರೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...