ಮಂಗಳೂರು ವಿವಿ; ಗಿಳಿವಿಂಡು 4 ನೇ ಮಹಾ ಸಮಾವೇಶ ಉದ್ಘಾಟನೆ

Date:

ಕೊಣಾಜೆ: ಕನ್ನಡವನ್ನು ಪುಸ್ತಕ ಹಾಗೂ ತಂತ್ರಜ್ಞಾನದಲ್ಲಿ ಸಮಾನವಾಗಿ ಬಳಸಬೇಕಿದೆ. ತಂತ್ರಜ್ಞಾನ ಯಾವುದೂ ಶಾಶ್ವತವಲ್ಲ.ನಾವು ಅದರ ಗುಲಾಮರಾಗಬಾರದು. ನಮ್ಮ ತಿಳುವಳಿಕೆಯನ್ನು ಬಿಟ್ಟುಕೊಟ್ಟು ಕೃತಕ ಬುದ್ಧಿಮತ್ತೆಗೆ ದಾಸರಾಗದಿರೋಣ. ಕನ್ನಡವನ್ನು ಇಟ್ಟುಕೊಂಡೇ ಎಲ್ಲಾ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಚಾಕಚಕ್ಯತೆ ನಮ್ಮಲಿರಬೇಕು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ್ ರೈ ಅವರು ಹೇಳಿದರು.

ಅವರು ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಭಾನುವಾರ ನಡೆದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಅಧ್ಯಾಪಕ, ಸಿಬ್ಬಂದಿಗಳ ಒಕ್ಕೂಟ “ಗಿಳಿವಿಂಡು(ರಿ)” ಇದರ ನಾಲ್ಕನೇ ಮಹಾ ಸಮಾವೇಶವನ್ನು ಅವರು ಉದ್ಘಾಟಿಸಿ ಅವರು ಮಾತನಾಡಿದರು.

1968 ರಲ್ಲಿ ಮೊಳಕೆಯೊಡೆದ ಕನ್ನಡದ ಬೀಜ ಎಸ್ ವಿಪಿ ಕನ್ನಡದ ಅಧ್ಯಯನ ಸಂಸ್ಥೆಯಾಗಿ ರೂಪುಗೊಂಡು ಹೆಮ್ಮರವಾಗಿ ಬೆಳೆಯುವುದರೊಂದಿಗೆ ಕನ್ನಡವನ್ನು ಕಟ್ಟುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಏಳು ತಲೆಮಾರುಗಳ ವಿದ್ಯಾರ್ಥಿಗಳು ಈ ಗಿಳಿವಿಂಡು ಸಮಾವೇಶದ ಮೂಲಕ ಕನ್ನಡದ ಮನಸ್ಸುಗಳನ್ಬು ಒಟ್ಟುಗೂಡಿಸಿರುವುದು ಸಂತಸ ತಂದಿದೆ ಎಂದರು.ಉಳ್ಳವರು ಶಿವಾಲಯ ಮಾಡುವರಯ್ಯ ಎಂದು ಅಂದು ಬಸವಣ್ಣ ಹೇಳಿದ್ದರು. ಆದರೆ ಪ್ರಸ್ತುತ ಉಳ್ಳವರು ಆಂಗ್ಲ ಶಾಲೆಯ ಮಾಡುವರಯ್ಯ ಎಂಬಂತಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳು ಆಂಗ್ಲ ಮಾಧ್ಯಮ ಶಾಲೆಯಾಗಿ ರೂಪುಗೊಳ್ಳುತ್ತಿದೆ. ಸಂವಹನಕ್ಕೆ ಬೇಕಾದಷ್ಟು ಮಾತ್ರ ಆಂಗ್ಲ ಇರಬೇಕು. ಕನ್ನಡವನ್ಬು ಪ್ರೀತಿಸಿ ಪ್ರೋತ್ಸಾಹಿಸಿ ಬೆಳೆಸುವ ಜವಬ್ಧಾರಿ ನಮ್ಮದಾಗಬೇಕು ಎಂದರು.

ಸಮಾರಂಭ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ‌.ಎಲ್.ಧರ್ಮ ಅವರು ವಹಿಸಿ ಮಾತನಾಡಿ ಮಂಗಳೂರು ವಿವಿಯ ಸ್ನಾತಕೋತ್ತರ ವಿಭಾಗಗಳು ಒಂದು‌ ಚಿಂತನೆಗೆ ಕಟ್ಟುಬೀಳದೆ ವಿವಿಧ ವಿಷಯಗಳಿಗೆ ತೆರೆದುಕೊಂಡು ಬೆಳೆಯಬೇಕು ಎಂದು ಹೇಳಿದರು. ಸಮಾರಂಭದಲ್ಲಿ ಮಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ಸೇವೆ ಸಲ್ಲಿಸಿದ ಪ್ರಾಧ್ಯಾಪಕರುಗಳಾದ ಪ್ರೊ ಬಿ.ಎ ವಿವೇಕ ರೈ, ಪ್ರೊ.ಕೆ ಚಿನ್ನಪ್ಪ ಗೌಡ, ಪ್ರೊಅಭಯಕುಮಾರ್, ಪ್ರೊ.ಶಿವರಾಮ ಶೆಟ್ಟಿ, ಪ್ರೊ.ಸೋಮಣ್ಣ, ಡಾ.ನಾಗಪ್ಪ ಗೌಡ, ಡಾ. ಧನಂಜಯ ಕುಂಬ್ಳೆ ಇವರನ್ನು ಸನ್ಮಾನಿಸಲಾಯಿತು.

ಗಿಳಿವಿಂಡುವಿನ ಅಧ್ಯಕ್ಷರಾದ ಪ್ರೊ.ಶಿವರಾಮ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ‌ ಪ್ರೊ.ನಾಗಪ್ಪ ಗೌಡ ಅವರು ವಂದಿಸಿದರು. ಡಾ.ಯಶುಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಡಾ.ಸಬಿತಾ ಬನ್ನಾಡಿ ಅವರ ಉಪನ್ಯಾಸ ಕಾರ್ಯಕ್ರಮ ನಡೆಯಿತು ಮತ್ತು ಗಿಳಿವಿಂಡು ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

  • ವಿಶ್ವವಿದ್ಯಾನಿಲಯದಲ್ಲಿ ಋಣಾತ್ಮಕ ಅಂಶಗಳಷ್ಟೇ ಅಲ್ಲ. ಅನೇಕ ಧನಾತ್ಮಕ ಅಂಶಗಳು, ಉತ್ತಮ ಸಂಶೋಧನೆಗಳು ಶೈಕ್ಷಣಿಕ ಚಟುವಟಿಕೆಗಳಾಗುತ್ತಿವೆ. ಸಮಾಜ ಇದನ್ನು ಗಮನಿಸಬೇಕು. ಕನ್ನಡ ವಿಭಾಗದ ವಿದ್ಯಾರ್ಥಿಗಳು ಕಳೆದ ಆರು ದಶಕಗಳಲ್ಲಿ ಅನನ್ಯವಾಗಿ ಬೆಳೆದು ಸಮಾಜಕ್ಕೆ ಆಸ್ತಿಯಾಗಿದ್ದಾರೆ”ಪ್ರೊ.ಪಿ.ಎಲ್ ಧರ್ಮ ಕುಲಪತಿಗಳು, ಮಂಗಳೂರು ವಿವಿ

” ನಾವು ಸಮ್ಮಿಶ್ರ ಸಂಸ್ಕೃತಿಯಲ್ಲಿ ಬೆಳೆದವರು. ತಮ್ಮದೇ ಸರಿ ಎನ್ನುವ ರಾಜಕೀಯದ ದಾರಿಗಿಂತ ಭಿನ್ನವಾಗಿ ಸಮ್ಮಿಶ್ರ ಸಂಸ್ಕೃತಿಯ ವಿವೇಕವನ್ನು ಎತ್ತಿಹಿಡಿಯಬೇಕು”ಪ್ರೊ.ವಿವೇಕ್ ರೈ ವಿಶ್ರಾಂತ ಕುಲಪತಿಗಳು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...