ವಕೀಲರು ಸಕಾಲದಲ್ಲಿ ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಿಸುವುದು ಅಗತ್ಯ: ನ್ಯಾಯಾಧೀಶ ಮಧುಕರ ಭಾಗವತ್

Date:

ಮೂಡುಬಿದಿರೆ: ಕಾನೂನು ವಿಚಾರದ ಸಮಸ್ಯೆಗಳು ಪ್ರತಿಯೊಬ್ಬರಲ್ಲೂ ಕಂಡುಬರುತ್ತದೆ. ವಕೀಲರು ಹಾಗೂ ಕಾನೂನು ಕಲಿಯುವ ವಿದ್ಯಾರ್ಥಿಗಳು ಸಕಾಲದಲ್ಲಿ ಜನಸಾಮಾನ್ಯರಲ್ಲಿ ಕಾನೂನಿನ ಸರಿಯಾದ ಅರಿವುದು ಮೂಡಿಸುವುದು ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಧುಕರ್ ಭಾಗವತ್ ಹೇಳಿದರು.

ಮೂಡುಬಿದಿರೆ ನ್ಯಾಯಾಲಯ ಮತ್ತು ವಕೀಲರ ಸಂಘದ ಜಂಟಿ ಆಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನದಲ್ಲಿ ನಡೆದ ಕಾನೂನು ನೆರವು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಕಳದ ಹಿರಿಯ ವಕೀಲ ಎಚ್. ಶೇಖರ್ ಮಡಿವಾಳ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕರ್ನಾಟಕ ಭೂಕಂದಾಯ ಕಾಯೆ ಮತ್ತು ಭೂ ಮಸೂದೆ ಕಾಯ್ದೆ ಕುರಿತು ಮಾತನಾಡಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮಾಜಿ ಸದಸ್ಯ, ಮೂಡುಬಿದಿರೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಝೈಬುನೀಸಾ, ಮೂಡುಬಿದಿರೆ ಜೆ.ಎಂ.ಎಫ್.ಸಿ ಸಿವಿಲ್ ನ್ಯಾಯಾಧೀಶೆ ಕಾವೇರಮ್ಮ ಎಂ., ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ., ಉಪಾಧ್ಯಕ್ಷ ಮನೋಜ್ ಶೆಣೈ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಭಂಡಾರಿ, ಭುವನ್ ಜ್ಯೋತಿ ಟ್ರಸ್ಟ್ನ ಕಾರ್ಯದರ್ಶಿ ಆರ್. ಪ್ರಶಂತ್ ಡಿಸೋಜ, ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ಮಹತೇಶ್ ಉಪಸ್ಥಿತರಿದ್ದರು. ಹಿರಿಯ ವಕೀಲ ಎಂ.ಎಸ್ ತಂತ್ರಿ ಸ್ವಾಗತಿಸಿದರು. ಜಯಪ್ರಕಾಶ್ ಭಂಡಾರಿ ನಿರೂಪಿಸಿ, ವಂದಿಸಿದರು. ವಕೀಲರು, ಭುವನಜ್ಯೋತಿ ಹಾಗೂ ಆಳ್ವಾಸ್ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...