ಮೂಡುಬಿದಿರೆ : ಪುಚ್ಚೇರಿಕಟ್ಟೆ ಅಂಗನವಾಡಿ ಕೇಂದ್ರ ಮತ್ತು ಕಿರಿಯ ಪ್ರಾಥಮಿಕ ಶಾಲಾ ವತಿಯಿಂದ ಮಕ್ಕಳ ದಿನಾಚರಣೆ ಕಾಯ೯ಕ್ರಮವನ್ನು ನಡೆಸಲಾಯಿತು.ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ ಛದ್ಮವೇಷ, ನೃತ್ಯ, ಮಡಕೆ ಒಡೆಯುವ ಸ್ಪರ್ಧೆ ಹಾಗೂ ಆಟೋಟ ಸ್ಪರ್ಧೆಗಳನ್ನು ಏಪ೯ಡಿಸಲಾಯಿತು.

ಪುರಸಭಾ ಸದಸ್ಯ ಪುರಂದರ ದೇವಾಡಿಗ ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ಪುಟಾಣಿ ನಿಹಾಲಿಯನ್ನು 2025 ರ ರಾಣಿ ಎಂದು ಘೋಷಿಸಲಾಯಿತು. ಎಸ್ ಡಿಎಂಸಿ ಅಧ್ಯಕ್ಷ ಭಾಸ್ಕರ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕ ಸುರೇಂದ್ರ ಪೂಜಾರಿ ಉಪಸ್ಥಿತರಿದ್ದರು. ಅಂಗನವಾಡಿ ಕಾಯ೯ಕತೆ೯ ವಿಜಯ ಸ್ವಾಗತಿಸಿದರು. ರಾಜಶ್ರೀ ವಂದಿಸಿದರು.


