vltvkannada.com ಮಂಗಳೂರು: ಮಂಗಳೂರು ವಕೀಲರ ಸಂಘದ ವತಿಯಿಂದ ಅಗಸ್ಟ್ 2 ರಂದು ಮಂಗಳೂರು ನ್ಯಾಯಾಲಯದ ಸಂಕೀರ್ಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಉಮಾ ಎಮ್. ಜಿ ರವರು ಉದ್ಘಾಟಿಸಲಿದ್ದಾರೆ, ಶ್ರೀ ಬಸವರಾಜ್ ಗೌರವಾನ್ವಿತ ನ್ಯಾಯಾಧೀಶರು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮಂಗಳೂರು ಉಪಸ್ಥಿತರಿರುತ್ತಾರೆ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಎಚ್.ವಿ ರಾಘವೇಂದ್ರ ರವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಆಟಿಯ ತಿಂಡಿ ತಿನ್ನಲು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್. ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.