ಬಂಟ್ವಾಳ: ಮನೆಯ ಆವರಣದ ಶೆಡ್‌ ನಲ್ಲಿ ಅಕ್ರಮ ಜಾನುವಾರುಗಳನ್ನು ಕಟ್ಟಿಕೊಂಡು ಗೋಹತ್ಯೆ, ಆರೋಪಿಯ ಮನೆ, ಶೆಡ್ ಜಪ್ತಿ.!

Date:

ಬಂಟ್ವಾಳ: ನ.16ರಂದು ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ (57) ಎಂಬವರ ಮನೆಯ ಆವರಣದಲ್ಲಿರುವ ಶೆಡ್‌ ನಲ್ಲಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್‌ ಐ ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ದಾಳಿ ಮಾಡಿದ್ದು ಮನೆಯ ಬಳಿಯ ಶೆಡ್‌ ನಲ್ಲಿ ಮೂರು ಜನರು, ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದ ಘಟನೆ ಬೆಳಕಿದೆ ಬಂದಿದೆ.

ದಾಳಿ ಸಮಯ ಇಬ್ಬರು ಪರಾರಿಯಾಗಿದ್ದು ಒರ್ವನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ಹೆಸರು ಮೈಯದಿ (57) ಎಂದು ತಿಳಿದುಬಂದಿದೆ. ಶೆಡ್‌ ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದ್ದು, ವಧೆ ಮಾಡಿದ ಸುಮಾರು 150 ಕೆಜಿ ದನದ ಮಾಂಸವನ್ನು ವಶ ಪಡಿಸಲಾಗಿದೆ.


ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ 172/2022 ಕಲಂ 4,5,7,12 ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 2020 ಕಲಂ 11(1)(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯಿದೆ ಹಾಗೂ ಕಲಂ 303(2)307 ಬಿಎನ್‌ ಎಸ್‌ ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ದಸ್ತಗಿರಿಯಾದ ಆರೋಪಿ ಮೈಯದಿ ಎಂಬಾತನನ್ನು ಮಾನ್ಯ ನ್ಯಾಯಾಲಯ ಹಾಜರುಪಡಿಸಲಾಗುವುದು. ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ.


ಆರೋಪಿಗಳು ಹೈನುಗಾರಿಕೆಯ ದನಗಳನ್ನು ಕದಿಯುತ್ತಿದ್ದು ಯಾವುದೇ ಪರವಾನಿಗೆ ಇಲ್ಲದೇ ಮನೆಯ ಆವರಣದ ಶೆಡ್‌ ನಲ್ಲಿ ಕಸಾಯಿಖಾನೆಯನ್ನು ನಿರ್ಮಾಣ ಮಾಡಿಕೊಂಡು ಮನೆಯಿಂದಲೇ ವಿದ್ಯುತ್‌ ಸಂಪರ್ಕ ಪಡೆದು ಜಾನುವಾರುಗಳ ವಧೆ ನಡೆಸಿರುವುದು ತಿಳಿದುಬಂದಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿದ್ದು ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ಮುಟ್ಟುಗೋಲು ಮಾಡುವ ಬಗ್ಗೆ ವರದಿಯನ್ನು ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...