ಪವರ್ ಫ್ರೆಂಡ್ಸ್, ಶಾಮಿಯಾನ ಮಾಲಕರ ಸಂಘದಿಂದ ಅಂಚೆ ಜನ ಸಂಪಕ೯ ಅಭಿಯಾನ

Date:

651ಮಂದಿ ಆಧಾರ್ ನೋಂದಣಿ, 245 ಮಂದಿ ಆರೋಗ್ಯ ವಿಮೆ ನೋಂದಣಿ

ಮೂಡುಬಿದಿರೆ : ಪವರ್ ಫ್ರೆಂಡ್ಸ್ ಬೆದ್ರ, ದ ಕ ಜಿಲ್ಲಾ ಶಾಮಿಯಾನ ಮಾಲಕರ ಸಂಘ, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಭಾನುವಾರ ಕನ್ನಡ ಭವನದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ, ಆಧಾರ್ ನೋಂದಣಿ, ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮಾ ಶಿಬಿರ ನಡೆಯಿತು.

ಉದ್ಯಮಿ ಶ್ರೀಪತಿ ಭಟ್ ದೀಪ ಬೆಳಗಿ ಉದ್ಘಾಟಿಸಿ ಶುಭ ಹಾರೈಸಿದರು. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಕೇಂದ್ರ ಸರ್ಕಾರದ ಮುತುವರ್ಜಿಯಿಂದ ಅಂಚೆ ಕಛೇರಿಗಳು ಹಿಂದಿನಂತೆಯೇ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಆರೋಗ್ಯ ಇನ್ನಿತರ ಎಲ್ಲಾ ಸೌಲಭ್ಯಗಳು ಅಂಚೆ ಇಲಾಖೆಯ ಮೂಲಕ ಬಡವರ್ಗವನ್ನು ತಲುಪುತ್ತಿದೆ ಎಂದರು.

ಶಾಮಿಯಾನ ಸಂಘದ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ, ಪವರ್ ಫ್ರೆಂಡ್ಸ್ ಅಧ್ಯಕ್ಷ ವಿನಯ್ ಕುಮಾರ್, ವಕೀಲ ಶರತ್ ಶೆಟ್ಟಿ, ಉದ್ಯಮಿ ಅಬುಲಾಲ್ ಪುತ್ತಿಗೆ, ಪುತ್ತೂರು ಅಂಚೆ ಇಲಾಖೆಯ ಮಾರುಕಟ್ಟೆ ವ್ಯವಸ್ಥಾಪಕ ಗುರುಪ್ರಸಾದ್,ಸಿಸ್ಟಮ್ ಅಡ್ಮಿನ್ ನೂತನ್ ಬಂಗೇರ ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ ಸುಮಾರು 651 ಮಂದಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿಯ ಸದುಪಯೋಗವನ್ನು ಪಡೆದುಕೊಂಡರು. ಸುಮಾರು 245 ಮಂದಿ ಅಪಘಾತ ಮತ್ತು ಆರೋಗ್ಯ ವಿಮೆಯ ನೋಂದಣಿ ಮಾಡಿಸಿಕೊಂಡರು. 39 ಮಂದಿ ಅಂಚೆ ಇಲಾಖೆಯ ಸಣ್ಣ ಉಳಿತಾಯ ಖಾತೆಗಳು, 3 ಅಂಚೆ ಜೀವ ವಿಮೆ ( 28,00,000 S/A ಹಾಗೂ 39,225/- ಪ್ರೀಮಿಯಂ) ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...