ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ, ಪದಗ್ರಹಣ ಸಮಾರಂಭ, ಸಾಧಕರಿಗೆ ಸನ್ಮಾನ

Date:

ಮಂಗಳೂರು; ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಮತ್ತು ಸಾಧಕರಿಗೆ ಗೌರವ ಸನ್ಮಾನ ನವಂಬರ್ 25 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ “ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ನಡೆಯಲಿದೆ.


ಬೆಳಿಗ್ಗೆ ಗಂಟೆ 10 ರಿಂದ 11 ರ ವರೆಗೆ ಕಾರ್ಯಕಾರಿ ಸಮಿತಿ ಸಭೆ ಮತ್ತು 29ನೇ ವಾರ್ಷಿಕ ಮಹಾಸಭೆ ಜರಗಲಿದೆ. ಬೆಳಿಗ್ಗೆ ಗಂಟೆ 11 ರಿಂದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಹಾಗೂ ಬಹಿರಂಗ ಅಧಿವೇಶನ ಕಾರ್ಯಕ್ರಮ ನಡೆಯಲಿದೆ.

ಬಹಿರಂಗ ಅಧಿವೇಶನದಲ್ಲಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ವನ್ನು ಆಚರಿಸುತ್ತಿರುವ ಒಕ್ಕೂಟದ ದಾನಿಗಳಾದ ಉಮಾ ಕೃಷ್ಣ ಶೆಟ್ಟಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು 2025ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಗೌರವ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮಹಾದಾನಿ, ದಾನಿಗಳು, ಪದಾಧಿಕಾರಿಗಳು, ವಿವಿಧ ಬಂಟರ ಸಂಘಗಳ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...