ಮೂಡುಬಿದಿರೆಗೆ ಶೀಘ್ರದಲ್ಲೇ ತಾಲ್ಲೂಕು ಕಾನೂನು ಸೇವಾ ಸಮಿತಿ

Date:

ಮೂಡುಬಿದಿರೆ: ಈಗಾಗಲೇ ರಾಜ್ಯದಲ್ಲಿ 149 ತಾಲ್ಲೂಕು ಕಾನೂನು ಸೇವಾ ಸಮಿತಿ ಕೆಲಸ ಮಾಡುತ್ತಿವೆ. ಇಲ್ಲಿನ ವಕೀಲರ ಬೇಡಿಕೆಯಂತೆ ಮೂಡುಬಿದಿರೆಯಲ್ಲೂ ಶೀಘ್ರದಲ್ಲೇ ತಾಲ್ಲೂಕು ಕಾನೂನು ಸೇವಾ ಸಮಿತಿ ಅಸ್ತಿತ್ವಕ್ಕೆ ಬರಲಿದೆ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಜೈಬುನ್ನೀಸ ಹೇಳಿದರು.

ಅವರು ಇಲ್ಲಿನ ಎಂಸಿಎಸ್ ಸೊಸೈಟಿಯಲ್ಲಿ ಮಂಗಳವಾರ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಂಭ್ರಮದ ಐದನೇ ದಿನದ ಕಾರ್ಯಕ್ರಮದಲ್ಲಿ ಸಹಕಾರ-ಉಚಿತ ಕಾನೂನು ಸೇವೆ ವಿಷಯದ ಕುರಿತು ಮಾತನಾಡಿದರು. ಗಾಳಿ, ನೀರು ತಾರತಮ್ಯ ಇಲ್ಲದೆ ಎಲ್ಲರಿಗು ಸಿಗುತ್ತಿದೆ. ಹಾಗೇನೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಪಡೆಯುವ ಹಕ್ಕಿದ್ದು ಅದರಲ್ಲಿ ತಾರತಮ್ಯ ಆಗಬಾರದು. ಕೋರ್ಟ್ ನಲ್ಲಿ ಬಗೆಹರಿಯದ ಪ್ರಕರಣಗಳು, ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನಗಳಲ್ಲಿ ಬಗೆಹರಿಸಲು ಪ್ರತಿ ಜಿಲ್ಲೆಯಲ್ಲಿ ಲೋಕ ಅದಾಲತ್‌ಗಳನ್ನು ನಡೆಸಲಾಗುತ್ತದೆ. ತಾಲ್ಲೂಕು ಕೇಂದ್ರಗಳಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಕಾರ‍್ಯನಿರ್ವಹಿಸುತ್ತವೆ. ಈ ಸೇವೆಯು ಸಂಪೂರ್ಣ ಉಚಿತವಾಗಿದ್ದು ತ್ವರಿತಗತಿಯಲ್ಲಿ ನ್ಯಾಯ ಸಿಗುತ್ತದೆ. ಮೂಡುಬಿದಿರೆ ಜನತೆಗೂ ಇಂತಹ ಸೌಲಭ್ಯ ಸಿಗಲು ತಾಲ್ಲೂಕು ಕಾನೂನು ಸೇವಾ ಸಮಿತಿ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದರು. ಸಹಕಾರ ಸಂಘಗಳ ಪ್ರಕರಣಗಳನ್ನು ಕೂಡ ಲೋಕ ಅದಾಲತ್ ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಅವರು ಹೇಳಿದರು.

ಶಾಸಕ ಉಮಾನಾಥ ಕೋಟ್ಯಾನ್, ತಹಶೀಲ್ದಾರ್ ಶ್ರೀಧರ್ ಮುಂದಲಮನಿ, ಭುವನಜ್ಯೋತಿ ಇನ್ಸಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಶಿರ್ತಾಡಿ ಇಲ್ಲಿನ ಪ್ರಾಂಶುಪಾಲ ಪ್ರದೀಪ ಎಮ್.ಡಿ, ಸೊಸೈಟಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ನಿರ್ದೇಶಕರಾದ ಪ್ರೇಮಾ ಸಾಲ್ಯಾನ್, ಅನಿತಾ ಪಿ. ಶೆಟ್ಟಿ, ಅಶೋಕ್ ಕಾಮತ್ ಉಪಸ್ಥಿತರಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಯಿತು. ಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿದರು. ಚೇತನಾ ಆರ್. ಹೆಗ್ಡೆ ಮತ್ತು ಗಣೇಶ್ ಕಾಮತ್ ಕಾಯ೯ಕ್ರಮ ನಿರೂಪಿಸಿದರು. ಬ್ಯಾಂಕ್ ಸಿಬಂದಿ ಸುದರ್ಶನ್ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...