ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ವತಿಯಿಂದ ಕಲಾವಿದರ ಯಕ್ಷಪಯಣದ ಸ್ವಗತ ‘ಯಕ್ಷಾಯಣ- ದಾಖಲೀಕರಣ’ ಸರಣಿ-8 ಕಾರ್ಯಕ್ರಮವು ಆ.5 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.

ಯಕ್ಷಗಾನ ರಂಗದ ಹಿರಿಯ ಕಲಾವಿದರಾದ ರಾಮಕೃಷ್ಣ ರಾವ್ ರೆಂಜಾಳ ಅವರು ದಾಖಲೀಕರಣ ಕಾರ್ಯಕ್ರಮದಲ್ಲಿ ಯಕ್ಷಪಯಣದ ಅನುಭವವನ್ನು ಹಂಚಿಕೊಳ್ಳಲಿದ್ದಾರೆ ಎಂದು ಯಕ್ಷಗಾನ ಕೇಂದ್ರದ ನಿರ್ದೇಶಕರಾದ ಡಾ.ಧನಂಜಯ ಕುಂಬ್ಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.