ವಾಲ್ಪಾಡಿಯಲ್ಲಿ ಅಕ್ರಮ ಕೋಳಿ ಅಂಕ: ಪೊಲೀಸರಿಂದ ದಾಳಿ, 10 ಜನ ವಶಕ್ಕೆ

Date:

ಮೂಡುಬಿದಿರೆ : ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಡೆಜಾಲು ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, 10 ಜನರನ್ನು, ನಗದು ಹಣ ಮತ್ತು ಕಾದಾಟಕ್ಕೆ ಬಳಸುತ್ತಿದ್ದ ಹುಂಜಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ವಾಲ್ಪಾಡಿ ಗ್ರಾಮದ ಉಡೆಜಾಲು ಎಂಬಲ್ಲಿನ ಮುತ್ತಯ್ಯ ಎಂಬುವವರ ಮನೆಯ ಮುಂಭಾಗದ ಗುಡ್ಡದಲ್ಲಿ ಕೆಲವು ವ್ಯಕ್ತಿಗಳು ಸೇರಿ, ಎರಡು ಅಂಕದ ಕೋಳಿಗಳಿಗೆ ಮಾರಕವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು ತಯಾರಾಗಿದ್ದರು ಮತ್ತು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು.

ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ. ಜಿ. ಅವರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಈ ಕುರಿತು ಖಚಿತ ಮಾಹಿತಿ ಲಭಿಸಿ ಅಲ್ಲಿಗೆ ತೆರಳಿದ್ದಾರೆ. ಪೊಲೀಸರನ್ನು ನೋಡಿದ ಕೂಡಲೇ ಕೋಳಿ ಅಂಕದ ಜೂಜಾಟಗಾರರು ಓಡಿ ಪರಾರಿಯಾಗಲು ಯತ್ನಿಸಿದಾಗ ಸುತ್ತುವರಿದ ಪೊಲೀಸರು ತಕ್ಷಣವೇ 10 ಮಂದಿಯನ್ನು ವಶಕ್ಕೆ ಪಡೆದುಕೊಂಡರು.ಅಜಯ್ , ಸಂಗಮ್ , ಸಂದೇಶ್, ನಿತೇಶ್ ಶೆಟ್ಟಿ ,ಅರುಣ್ ಬಿ.ಎಸ್., ಕೃಷ್ಣಪ್ಪ ಪೂಜಾರಿ ,ರವಿ ಕುಲಾಲ್, ಯಾದವ್ , ದಿನೇಶ್ ಸದಾಶಿವ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌.

ಇದೇ ವೇಳೆ, ಸ್ಥಳದಿಂದ ತಪ್ಪಿಸಿಕೊಂಡು ಹೋದ ಸಂಪತ್, ಸುನಿಲ್ ಹಾಗೂ ಇತರರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.ಕೋಳಿ ಅಂಕದ ಜೂಜಾಟಕ್ಕೆ ಪಣವಾಗಿ ಬಳಸಲು ಉದ್ದೇಶಿಸಿದ್ದ 6 ಹುಂಜಗಳು ಮತ್ತು ರೂ. 4,500 ನಗದು ಹಣವನ್ನು ಪಂಚರ ಸಮ್ಮುಖದಲ್ಲಿ ಮಹಜರು ಮೂಲಕ ಸ್ವಾಧೀನಪಡಿಸಿಕೊಳ್ಳಲಾಯಿತು. ದಸ್ತಗಿರಿಯಾದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಳಿ ಅಂಕದ ದಾಳಿ ಕಾರ್ಯಾಚರಣೆಯಲ್ಲಿ ಮೂಡುಬಿದಿರೆ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಸಂದೇಶ್ ಪಿ.ಜಿ. ಮತ್ತು ಸಿಬ್ಬಂದಿಗಳಾದ ರಾಜೇಶ್, ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಖಿಲ್ ಅಹಮದ್, ರಮೇಶ್, ವೆಂಕಟೇಶ್, ಚಂದ್ರಶೇಖರ ಮತ್ತು ಉಮೇಶ್ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...