ಈಜು ಸ್ಪಧೆ೯: ಪ್ರೇರಣಾ ಶಾಲೆಯ ಪ್ರೀತಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Date:

ಮೂಡುಬಿದಿರೆ: ಇಲ್ಲಿನ ಕಡಲಕೆರೆಯಲ್ಲಿರುವ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪ್ರೀತಿ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟದಲ್ಲಿ ಸಮಗ್ರ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ 4 x 100 ಮೀಟರ್ ರಿಲೇ: ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಿಂದೆ ಅವರು 400 ಮೀಟರ್ ಫ್ರೀ ಸ್ಟೈಲ್- ದ್ವಿತೀಯ ಸ್ಥಾನ, 400 ಮೀಟರ್ ಫ್ರೀ ಸ್ಟೈಲ್- ಪ್ರಥಮ ಸ್ಥಾನ, 100 ಮೀಟರ್ ಫ್ರೀ ಸ್ಟೈಲ್: ದ್ವಿತೀಯ ಸ್ಥಾನ ಹಾಗೂ 50 ಮೀಟರ್ ಫ್ರೀ ಸ್ಟೈಲ್ -ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಸಾಧನೆ ಮಾಡಿದ್ದರು. ವಿದ್ಯಾಭಾರತಿ ಈಜು ಸ್ಪರ್ಧೆಯ ರಾಜ್ಯಮಟ್ಟದಲ್ಲಿ 100 ಮೀಟರ್ ಫ್ರೀ ಸ್ಟೈಲ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಕ್ರೀಡೆಯಲ್ಲಿ ಬಹುಮುಖ ಪ್ರತಿಭೆ ಹೊಂದಿರುವ ಈಕೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಾಟ್‌ಪುಟ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ಪ್ರೀತಿ ಮೂಡುಬಿದಿರೆ ಈಜು ಕೊಳ ಸಂಕೀರ್ಣದ ಉದ್ಯೋಗಿ ಬಸವರಾಜಾ- ಎಲ್ಲಿಜಮ್ಮ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...