ಅಭಿವೃದ್ಧಿಯ ಪಥದತ್ತ ತೆಂಕಮಿಜಾರು ಗ್ರಾಮ ಪಂಚಾಯತ್, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

Date:

ಮೂಡುಬಿದಿರೆ : ತೆಂಕ ಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಇದೀಗ ಕೆಲವು ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾಪ೯ಣೆಗೊಳಿಸಲಾಗಿದ್ದು ಇನ್ನು ಹೆಚ್ಚಿನ ಬೇಡಿಕೆಗಳಿದ್ದು ಆ ಕಾಮಗಾರಿಗಳನ್ನು ಆದಷ್ಟು ಬೇಗ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಪಥದತ್ತ ಸಾಗಿಸಲಾಗುವುದು ಎಂದು ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು.

ಅವರು ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಕುಮೇರಿನಲ್ಲಿ ನಿಮಿ೯ಸಲಾಗಿರುವ ಬಸ್ ಸ್ಟ್ಯಾಂಡ್, ಕೊಪ್ಪದ ಕುಮೇರು ಮತ್ತು ವಂಟಿಮಾರು ಅಂಗನವಾಡಿ ಕೇಂದ್ರ, ಅಶ್ವತ್ಥಪುರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪಂಚಾಯತ್ ನಲ್ಲಿ ಲೈಬ್ರೆರಿಯನ್ನು ಸೋಮವಾರ ಲೋಕಾಪ೯ಣೆಗೊಳಿಸಿ ಮಾತನಾಡಿದರು.

ಪಂಚಾಯತ್ ಅಧ್ಯಕ್ಷೆ ಶಾಲಿನಿ ಕೆ. ಸಾಲ್ಯಾನ್ ಅಧ್ಯಕ್ಷತೆ ಯಲ್ಲಿ ನಡೆದ ಕಾಯ೯ಕ್ರಮದಲ್ಲಿ ಊರಿನ ಹಿರಿಯರಾದ ರಘುನಾಥ ಭಟ್ ಅವರು ಭಾಗವಹಿಸಿ ಮಾತನಾಡಿ ಸದಸ್ಯರ ಮುತುವಜಿ೯ ಹಾಗೂ ಶಾಸಕರು ಸರಕಾರದಿಂದ ತಂದ ಅನುದಾನದಿಂದಾಗಿ ಅಭಿವೃದ್ಧಿ ಕಾಮಗಾರಿಗಳು ನಡೆಯಲು ಸಾಧ್ಯವಾಗಿದೆ. ಶಾಸಕರ ಜೆಸಹಕಾರದಿಂದ ವಂಟಿಮಾರಿನ ಕೊಲ್ಲೊಟ್ಟು ಎಂಬಲ್ಲಿ ಮನೆಗಳ ನಿಮಾ೯ಣವಾಗಿದೆ ಇದೀಗ ಅಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು ಅದನ್ನು ಆದಷ್ಟು ನಿವಾರಿಸಬೇಕೆಂದು ಶಾಸಕರಲ್ಲಿ ಆಗ್ರಹಿಸಿದರು.

ಬಿಜೆಪಿ ಮಂಡಲದ ಪ್ರ. ಕಾಯ೯ದಶಿ೯ ರಂಜಿತ್ ಪೂಜಾರಿ ತೋಡಾರು, ಗ್ರಾ. ಪಂ. ಸದಸ್ಯರಾದ ರುಕ್ಮಿಣಿ, ಜಯಲಕ್ಷ್ಮೀ ಶೆಟ್ಟಿಗಾರ್, ವಿದ್ಯಾನಂದ ಶೆಟ್ಟಿ, ಮಹೇಶ್, ದಿನೇಶ್ ಭಟ್, ಜಯಲಕ್ಷ್ಮೀ, ನಿಶಾ ಶೆಟ್ಟಿ, ಲಿಂಗಪ್ಪ ಗೌಡ, ಲಕ್ಷ್ಮೀ, ದಿನೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವೀಚಾರಕಿ ಶುಭ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದಭ೯ದಲ್ಲಿ ಬಡಗಮಿಜಾರು ಅಂಗನವಾಡಿ ಕೇಂದ್ರ ಹಾಗೂ ಗರಡಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ, ಕಾಯ೯ದಶಿ೯ ರಮೇಶ್ ಬಂಗೇರಾ, ಕೊಪ್ಪದ ಕುಮೇರು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ಯಾಮಲಾ, ಅಂಗನವಾಡಿ ಕಾಯ೯ಕತೆ೯ಯರಾದ ಕವಿತಾ, ಹೇಮಾವತಿ, ದೀಕ್ಷಿತಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...