ಅಕ್ರಮ-ಸಕ್ರಮ ಸಮಿತಿ ಸಭೆ ನಡೆಸುವಂತೆ ಶಾಸಕರಿಗೆ ವಾಸುದೇವ ನಾಯಕ್ ಒತ್ತಾಯ

Date:

ಮೂಡುಬಿದಿರೆ: ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಉಮಾನಾಥ ಕೋಟ್ಯಾನ್ ಅವರು ಕಳೆದ ಕೆಲವು ವರ್ಷಗಳಿಂದ ಅಕ್ರಮ-ಸಕ್ರಮ ಮತ್ತು ಬಗರ್ ಹುಕುಂ ಸಮಿತಿ ಸಭೆಗಳನ್ನು ನಡೆಸದೆ ಇರುವುದರಿಂದಾಗಿ ಸಾವಿರಾರು ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ. ಇದರಿಂದಾಗಿ ಬಡ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ಶಾಸಕರು ಕೂಡಲೇ ಸಭೆ ನಡೆಸಿ ಇತ್ಯಥ೯ಗೊಳಿಸಬೇಕು ಎಂದು ತಾಲೂಕು ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ವಾಸುದೇವ ನಾಯಕ್ ಅವರು ಒತ್ತಾಯಿಸಿದ್ದಾರೆ.

ಅವರು ಸೋಮವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಶಾಸಕರು ಅವರ ಅವಧಿಯಲ್ಲಿ ಕೇವಲ ಮೂರು ಸಭೆಗಳನ್ನು ಮಾತ್ರ ನಡೆಸಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಈ ಸಮಿತಿಯ ಸಭೆಯೇ ನಡೆದಿಲ್ಲ. ಪ್ರಸ್ತುತ ಫಾರಂ 50, ಫಾರಂ 53, ಮತ್ತು ಫಾರಂ 57ರ ಅಡಿಯಲ್ಲಿ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೇ ಉಳಿದುಕೊಂಡಿವೆ. ಇದರಿಂದ ಭೂಮಿ ಮಂಜೂರಾತಿಗಾಗಿ ಕಾಯುತ್ತಿರುವ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗಿದೆ,” ಎಂದು ಆತಂಕ ವ್ಯಕ್ತಪಡಿಸಿದರು. ಬಾಕಿ ಉಳಿದಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಮಿತಿ ಸಭೆಗಳನ್ನು ತುರ್ತಾಗಿ ಕರೆಯಬೇಕು. ಬಡವರ ಭೂ ಸಮಸ್ಯೆಗಳನ್ನು ಬಗೆಹರಿಸಲು ಶಾಸಕರು ಉಮಾನಾಥ ಕೋಟ್ಯಾನ್ ಅವರು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಕರುಣಾಕರ, ಮರಿಟಾ ಮೆನೇಜಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...