ಶಿಕ್ಷಕರ ಸೇವಾ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

Date:

ಮಂಗಳೂರು: ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಅಧೀನ ಸಂಸ್ಥೆಯಾದ ಶಿಕ್ಷಕರ ಸೇವಾ ಪ್ರತಿಷ್ಠಾನದಿಂದ ಐದರಿಂದ ಪಿಯುಸಿ ವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಶಿಕ್ಷಕರ ಸಹಕಾರಿ ಸಂಘದ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿ ಮಾತನಾಡಿದ ಮಂಗಳೂರು ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷರಾದ ಶ್ರೀ ಕೆಎಂ ಕೆ ಮಂಜನಾಡಿ ಅವರು ಸಾಂಕೇತಿಕವಾಗಿ ಇವತ್ತು ವಿದ್ಯಾರ್ಥಿ ವೇತನವನ್ನು ವಿತರಿಸಲಾಗಿದ್ದು. ಅರ್ಜಿ ಸಲ್ಲಿಸಿದ ಎಲ್ಲರಿಗೂ ಮುಂದಿನ ದಿನಗಳಲ್ಲಿ ಅವರವರ ಖಾತೆಗೆ ವಿದ್ಯಾರ್ಥಿ ವೇತನವನ್ನು ಜಮಾ ಮಾಡಲಾಗುವುದು. ವಿದ್ಯಾರ್ಥಿಗಳು ಪಡೆದುಕೊಂಡ ಈ ವಿದ್ಯಾರ್ಥಿ ವೇತನವನ್ನು ತಮ್ಮ ಶೈಕ್ಷಣಿಕ ಕಾರ್ಯಗಳಿಗೆ ಮಾತ್ರ ಬಳಸಿಕೊಂಡು ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಸಮುದಾಯದ ಪ್ರತಿ ಒಬ್ಬ ರಿಗೆ ಪರಸ್ಪರ ಸಹಕಾರ ನೀಡಬೇಕು ಎಂದರು.

ಪ್ರತಿಷ್ಠಾನದ ಉಪಾಧ್ಯಕ್ಷರಾದ ರವಿಕಲಾ ಶೆಟ್ಟಿ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದು, ಶಿಕ್ಷಕರ ಸಹಕಾರಿ ಪತ್ತಿನ ಸಂಘದ ನಿರ್ದೇಶಕರುಗಳಾದ ಹಿಲ್ದಾ ಕ್ಲೈಮಾನ್ಸಿಯ ಪಿಂಟೋ, ನಿವೃತ್ತ ಪ್ರಾಂಶುಪಾಲರಾದ ಡಾ. ಎನ್ ಇಸ್ಮಾಯಿಲ್, ಚಂದ್ರಶೇಖರ್, ರಘುನಾಥ್ ಭಟ್, ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶರ್ಮಿಳ, ಮಹಾದೇವಿ, ಪ್ರತಿಷ್ಠಾನದ ನಿರ್ದೇಶಕರುಗಳು ಭಾಗವಹಿಸಿದ್ದರು.

ಕಾರ್ಯದರ್ಶಿ ಉದಯ ನಾಯಕ ರವರು ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...