ಶಿವಮೊಗ್ಗ| ಕಾಂಗ್ರೆಸ್ ಪ್ರತಿಭಟನೆಯಲ್ಲಿ ಎಎಸ್ಐ ಮಾಂಗಲ್ಯ ಸರ ಕಳವು: ಕಣ್ಣೀರಿಟ್ಟ ಅಧಿಕಾರಿ, ಕದ್ದವರು ಯಾರು?

Date:

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಪ್ರತಿಭಟನೆ ವೇಳೆ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರವನ್ನೇ ಕಳ್ಳರು ಎಗರಿಸಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧದ ಪಿತೂರಿ ಕಾನೂನುಬಾಹಿರ ಎಂದು ಸಾಬೀತಾದ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದರು. ಈ ವೇಳೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಎಎಸ್‌ಐ ಅಮೃತಾ ಅವರು ಪ್ರತಿಭಟನಾಕಾರರನ್ನು ಬಂಧಿಸುವ ವೇಳೆ ಈ ಘಟನೆ ನಡೆದಿದೆ.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಬಂದೋಬಸ್ತ್‌ನಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಎಎಸ್ಐ ಆಗಿರುವ ಅಮೃತಾ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಚಿನ್ನದ ಮಾಂಗಲ್ಯ ಸರ ಕಳುವಾಗಿರುವುದು ತಿಳಿಯುತ್ತಿದ್ದಂತೆಯೇ ಎಎಸ್‌ಐ ಅಮೃತಾ ಅವರು ಸ್ಥಳದಲ್ಲೇ ಕಣ್ಣೀರು ಹಾಕಿದ ಘಟನೆ ನಡೆಯಿತು. ಕರ್ತವ್ಯ ನಿರತ ಅಧಿಕಾರಿಯೊಬ್ಬರ ಸರವೇ ಕಳುವಾಗಿರುವುದು ಇಲಾಖೆಗೆ ಮತ್ತು ಸಹೋದ್ಯೋಗಿಗಳಿಗೆ ಭಾರೀ ಮುಜುಗರ ಹಾಗೂ ಆತಂಕ ತಂದಿದೆ. ಕೂಡಲೇ ಸ್ಥಳದಲ್ಲಿದ್ದ ಇತರೆ ಪೊಲೀಸ್ ಅಧಿಕಾರಿಗಳು ಅಮೃತಾ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬುವ ಪ್ರಯತ್ನ ಮಾಡಿದರು.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಈ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ. ಪ್ರತಿಭಟನೆಯ ವೇಳೆ ಸೆರೆಹಿಡಿಯಲಾದ ವಿಡಿಯೋ ತುಣುಕುಗಳು ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ಜಾಲ ಬೀಸಲಾಗಿದೆ. ಕಾಂಗ್ರೆಸ್ ಪ್ರತಿಭಟನೆಯ ಗದ್ದಲದ ನಡುವೆ ಈ ದುಷ್ಕೃತ್ಯ ಎಸಗಿದವರು ಯಾರು ಎಂಬುದು ಪೊಲೀಸರ ತನಿಖೆಯಿಂದಲೇ ತಿಳಿಯಬೇಕಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...