
ಉಳ್ಳಾಲ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ಒಬ್ಬ ರೈತ ಮತ್ತು ಓರ್ವ ರೈತ ಮಹಿಳೆಗೆ (ಅರ್ಜಿದಾರರ ಹೆಸರಿನಲ್ಲಿ ಪಹಣಿ ಇರುವುದು ಕಡ್ಡಾಯ) ಜಿಲ್ಲಾಮಟ್ಟದ ರೈತ ಪ್ರಶಸ್ತಿಯನ್ನು ನೀಡಲಿದ್ದಾರೆ.
ಪ್ರಶಸ್ತಿಯನ್ನು ಅಕ್ಟೋಬರ್‌ನಲ್ಲಿ ನಡೆಯಲಿರುವ ಕೃಷಿ ಮೇಳದಲ್ಲಿ ನೀಡಲಾಗುವುದು. ಆಸಕ್ತ ರೈತ, ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಳ್ಳಾಲ, ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ ಮಂಗಳೂರು ಅಥವಾ ಜಂಟಿ ಕೃಷಿ ನಿರ್ದೇಶಕರ ಕಛೇರಿ. ಕೃಷಿ ಇಲಾಖೆ, ಲೋಕೋಪಯೋಗಿ ಇಲಾಖೆ ಕಟ್ಟಡ. ಮೊದಲನೆ ಮಹಡಿ, ಮಂಗಳೂರು ಇಲ್ಲಿ ಲಭ್ಯವಿರುವ ಅರ್ಜಿಯನ್ನು ಪಡೆದು ಭರ್ತಿಮಾಡಿ ಸ.15 ರ ಒಳಗೆ ಈ ಮೇಲಿನ ಕಚೇರಿಗೆ ನೀಡಬೇಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ 9480838970, 8794706468, 8277931060 ಸಂಪರ್ಕಿಸಬೇಕಾಗಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.