ಸಮೃದ್ಧಿ ಸಂಜೀವಿನಿ ಒಕ್ಕೂಟದಿಂದ ಗ್ರಾಮೀಣ ಉತ್ಪನ್ನಗಳ ಮಾರಾಟ – ಸ್ವ ಉದ್ಯೋಗ ತರಬೇತಿ

Date:

ಮೂಡುಬಿದಿರೆ: ಸ್ತ್ರೀಯರು ದೇಶದ ಬೆನ್ನೆಲುಬು. ಅವರ ಜಾಗೃತಿ ಸ್ವಸಹಾಯ ಗುಂಪುಗಳ ಕ್ರೀಯಾಶೀಲತೆಯಿಂದ ದೇಶದ ಆರ್ಥಿಕ ಪ್ರಗತಿಯಾಗುತ್ತಿದೆ. ಸಮರ್ಪಣಾಭಾವದಿಂದ ಸಾಮಾಜಿಕ ಪ್ರಗತಿಗೆ ತೊಡಗಿಸಿಕೊಂಡಾಗ ದೇಶ ಬೆಳೆಯುತ್ತದೆ ಎಂದು ಮೂಡುಬಿದಿರೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸಾಯೀಶ್ ಚೌಟ ಹೇಳಿದರು.

ಅವರು ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ ಮೂಡುಬಿದಿರೆ ಇದರ ರಜತ ಮಹೋತ್ಸವ ಅಂಗವಾಗಿ ಸಮೃದ್ಧಿ ಸಂಜೀವಿನಿ ಪಂಚಾಯತ್ ಮಟ್ಟದ ಒಕ್ಕೂಟ ಹೊಸಬೆಟ್ಟು ಇದರ ಸಹಕಾರದಲ್ಲಿ ಶನಿವಾರ ಸಮಾಜ ಮಂದಿರದಲ್ಲಿ ಆಯೋಜಿಸಿದ್ದ ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ ಮತ್ತು ಗ್ರಾಮೀಣ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಸಭಾ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನವಚೇತನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷೆ ವಸಂತಿ ಶೆಟ್ಟಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಆದರ್ಶ ಸಂಸ್ಥೆ ದುರ್ಬಲ ಅಶಕ್ತ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಯತ್ನಿಸುತ್ತಿದೆ. ಸ್ವಸಹಾಯ ಗುಂಪುಗಳ ಸದಸ್ಯರೇ ಸೇರಿಕೊಂಡು ನವಚೇತನ ಸೌಹಾರ್ದ ಸಹಕಾರಿ ಆರ್ಥಿಕ ವ್ಯವಹಾರ ಸಂಸ್ಥೆಯನ್ನು ಹುಟ್ಟುಹಾಕಿ ಬೆಳೆಸುವಲ್ಲಿ ಆದರ್ಶ ನೀಡಿದ ಸಹಕಾರ ಅದ್ಭುತವಾದುದು ಎಂದು ಹೇಳಿದರು.

ದ.ಕ. ಜಿಲ್ಲಾ ಪಂಚಾಯತ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಮಾರಾಟ ಮಳಿಗೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ ಗ್ರಾಮೀಣ ಭಾಗದ ಮಹಿಳೆಯರು ಮನೆಯಲ್ಲಿ ತಯಾರಿಸುತ್ತಿದ್ದ ಉತ್ಪನ್ನಗಳನ್ನು ಮಾರಾಟ ಮಾಡಲು ಸಂಜೀವಿನಿ ಮೂಲಕ ಮಾರುಕಟ್ಟೆಗಳನ್ನು ಒದಗಿಸಿ ಮಹಿಳೆಯರನ್ನು ಸಬಲೀಕರಣ ಮಾಡಲು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಅವರಿಗೆ ಸ್ವಸಹಾಯ ಗುಂಪುಗಳು ಹಾಗೂ ಬ್ಯಾಂಕುಗಳ ಮೂಲಕ ಕಡಿಮೆ ಬಡ್ಡಿದರದ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆಯ ಅಧ್ಯಕ್ಷ ಜೇಕಬ್ ವರ್ಗಿಸ್ ಪ್ರಾಸ್ತಾವಿಕ ಮಾತುಗಳನ್ನಾಡಿ ಜನರ ಸ್ವಾವಲಂಬಿ ಜೀವನ, ಕೌಶಲ್ಯಾಭಿವೃದ್ಧಿ, ಸಾಮಾಜಿಕ ಸಬಲತೆಗೆ ಆದ್ಯತೆ ನೀಡಿ ಸಂಸ್ಥೆ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು. ಎನ್.ಆರ್.ಎಲ್.ಎಂ. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ನಿಖಿಲ್, ಹೊಸಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸವಿತ ಕುಮಾರಿ ಎಂ., ಸ್ತ್ರೀಶಕ್ತಿ ಮೂಡುಬಿದಿರೆ ವಲಯ ಮೇಲ್ವಿಚಾರಕಿ ಶ್ರೀಮತಿ ಶುಭ, ಆದರ್ಶ ನಿರ್ದೇಶಕರಾದ ಶೆರ್‍ಲಿ ಟಿ. ಬಾಬು, ಇಮ್ಯಾನ್ಯುವೆಲ್ ಮೋನಿಸ್ ಅತಿಥಿಗಳಾಗಿ ವೇದಿಕೆಯಲ್ಲಿದ್ದರು.

ಗೋಪಿ ಮತ್ತು ಬಳಗ ಪ್ರಾರ್ಥನೆಗೈದರು. ನೆಲ್ಲಿಕಾರು ಎಂಬಿಕೆ ಗೀತಾ ಜೈನ್ ಸ್ವಾಗತಿಸಿದರು. ಹೊಸಬೆಟ್ಟು ಎಂಬಿಕೆ ಮಮತಾ ಕಾರ್ಯಕ್ರಮ ನಿರೂಪಿಸಿ, ಶೋಭಾ ಭಾಸ್ಕರ್ ಧನ್ಯವಾದವಿತ್ತರು. ಸಭಾ ಕಾರ್ಯಕ್ರಮದ ನಂತರ ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ ನಡೆಯಿತು. ಶನಿವಾರ ಮತ್ತು ಭಾನುವಾರ ಸಮಾಜ ಮಂದಿರ ಸಭಾದಲ್ಲಿ ಸ್ವಸಹಾಯ ಸಂಘಗಳ ಗ್ರಾಮೀಣ ಮಹಿಳೆಯರಿಂದ ತಯಾರಿಸಲ್ಪಟ್ಟ ಗ್ರಾಮೀಣ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಮನಬೆಟ್ಟುವಿನಲ್ಲಿ ಉಚಿತ ಆರೋಗ್ಯ ಮತ್ತು ನೇತ್ರಾ ಚಿಕಿತ್ಸಾ ಶಿಬಿರ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ...

ಅಣಬೆ ಕೃಷಿ ಮತ್ತು ಸಾಬೂನು ತಯಾರಿಕೆಯ ಬಗ್ಗೆ ಮಾಹಿತಿ

ಮೂಡುಬಿದಿರೆ: ರೈತ ದಿನಾಚರಣೆ ಅಂಗವಾಗಿ ತೆಂಕ ಮಿಜಾರ್ ಗ್ರಾಮ ಪಂಚಾಯತ್ ಹಾಗೂ...

ಕೇಮಾರು: ಶಾಲಾ ವಾರ್ಷಿಕೋತ್ಸವ ಸಮಾರಂಭ

ಮೂಡುಬಿದಿರೆ : ಕೇಮಾರು ದ.ಕ.ಜಿ.ಪಂ‌‌ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ವಿಜೃಂಭಣೆಯಿಂದ...

ಶಾಲಾಡಳಿತವು ಶಿಕ್ಷಣದೊಂದಿಗೆ ಕೈ ಜೋಡಿಸಿದಾಗ ಯಶಸ್ಸು ಸಾಧ್ಯ: ಶಶಿಧರ್ ಡಿ. ಡಿ. ಪಿ. ಐ.

ಉಳ್ಳಾಲ: ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ...