ಆಳ್ವಾಸ್ ಕ್ರಿಸ್ಮಸ್-2025: ಕ್ರಿಸ್ಮಸ್ ಜಗತ್ತಿಗೆ ಶಾಂತಿ, ಪ್ರೀತಿ, ಸೌಹಾದ೯ತೆಯನ್ನು ಸಾರುತ್ತದೆ

Date:

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿರುವ ಮುಂಡ್ರುದೆಗುತ್ತು ಶ್ರೀ ಕೆ. ಅಮರನಾಥ ಶೆಟ್ಟಿ (ಕೃಷಿಸಿರಿ ವೇದಿಕೆ) ಸಭಾಂಗಣದಲ್ಲಿ `ಆಳ್ವಾಸ್ ಕ್ರಿಸ್ಮಸ್ 2025′ ಕಾರ್ಯಕ್ರಮ ನಡೆಯಿತು.

ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಬಿಷಪ್ ವಂದನೀಯ ಡಾ. ಅಲೋಶಿಯಸ್ ಪೌಲ್ ಡಿಸೋಜ ಕ್ರಿಸ್ಮಸ್ ಸಂದೇಶ ನೀಡಿ ಪ್ರೀತಿ, ಶಾಂತಿ, ಸೌಹಾರ್ದತೆಯ ಸಂದೇಶವನ್ನು ಕ್ರಿಸ್ಮಸ್ ಇಡೀ ವಿಶ್ವಕ್ಕೆ ನೀಡುತ್ತದೆ. ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗದೇ ಮಾನವೀಯತೆನ್ನು ಸಕಲರಿಗೆ ತೋರಿಸುವುದು ಕ್ರೈಸ್ತ ಧರ್ಮದ ಉದ್ದೇಶ. ಕ್ರಿಸ್‌ಮಸ್ ಹಬ್ಬವು ಕೇವಲ ಸಂಭ್ರಮಕ್ಕೆ ಸೀಮಿತವಾಗದೆ, ಪರಸ್ಪರ ಸಹಬಾಳ್ವೆ, ಮಾನವೀಯತೆ ಮತ್ತು ಮನುಕುಲದ ಸೇವೆಯ ಸಂದೇಶವನ್ನು ಸಾರುತ್ತದೆ ಎಂದರು.

ಮಂಗಳೂರಿನ ಸೇಂಟ್ ಜೂಜ್ ವಾಜ್ ಹೋಮ್‌ನ ನಿವೃತ್ತ ಹಿರಿಯ ಧರ್ಮಗುರು ವಂದನೀಯ ಫ್ರಾನ್ಸಿಸ್ ಕ್ಸೇವಿಯರ್ ಗೋಮ್ಸ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಡಾ. ಆಳ್ವರು ತಮ್ಮ ಜೀವನದಲ್ಲಿ ಬಹಳಷ್ಟು ಎಡರುತೊಡರುಗಳನ್ನು ಕಂಡಿದ್ದಾರೆ. ಅವರು ಸಮಾಜ ಜೀವಿಯಾಗಿ ವ್ಯಕ್ತಿವನ್ನು ಹೊಂದಿರುವುದು ಮಾತ್ರವಲ್ಲ, ತಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ತಮ್ಮದೇ ರೀತಿಯಲ್ಲಿ ನೀಡಿದ್ದಾರೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ `ಮಿನಿ ಇಂಡಿಯಾ’ ಪರಿಕಲ್ಪನೆಯೊಂದಿಗೆ ನಾವು ವಿವಿಧ ಧರ್ಮಗಳ ಹಬ್ಬಗಳನ್ನು ಸಂಸ್ಥೆಯಲ್ಲಿ ಆಚರಿಸುತ್ತಿದ್ದೇವೆ. ದೇಶಿಯ ಚಿಂತನೆ, ಸಾಮಾಜಿಕ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಮನದಟ್ಟು ಮಾಡಬೇಕೆನ್ನುವ ಉದ್ದೇಶದಿಂದ ಪ್ರತಿಯೊಂದು ಹಬ್ಬಗಳನ್ನು ಆಚರಿಸುತ್ತಿದ್ದೇವೆಯೇ ಹೊರತು ಯಾರನ್ನು ಮೆಚ್ಚಿಸಲು ಅಲ್ಲ. ಮಕ್ಕಳಲ್ಲಿ ಮನಸ್ಸು ಕಟ್ಟುವ ಪ್ರಯತ್ನವನ್ನು ಅರ್ಥಪೂರ್ಣವಾಗಿ ಮಾಡುತ್ತಿದ್ದೇವೆ ಎಂದರು.ಎಂದರು.

ಸಾಂಸ್ಕೃತಿಕ ಮೆರುಗು: ಕಾರ್ಯಕ್ರಮದ ಆರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ತಂಡದಿಂದ ಆಕರ್ಷಕ ಮೆರವಣಿಗೆ ನಡೆಯಿತು. ಸ್ತುತಿ ಮತ್ತು ಆರಾಧನೆಯೊಂದಿಗೆ ವೇದಿಕೆಯ ಕಾರ್ಯಕ್ರಮಗಳು ಸಂಪನ್ನಗೊಂಡವು. ನಂತರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ‘ರಂಗ್-ತರಂಗ್’ ತಂಡದವರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಮನಬೆಟ್ಟುವಿನಲ್ಲಿ ಉಚಿತ ಆರೋಗ್ಯ ಮತ್ತು ನೇತ್ರಾ ಚಿಕಿತ್ಸಾ ಶಿಬಿರ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ...

ಅಣಬೆ ಕೃಷಿ ಮತ್ತು ಸಾಬೂನು ತಯಾರಿಕೆಯ ಬಗ್ಗೆ ಮಾಹಿತಿ

ಮೂಡುಬಿದಿರೆ: ರೈತ ದಿನಾಚರಣೆ ಅಂಗವಾಗಿ ತೆಂಕ ಮಿಜಾರ್ ಗ್ರಾಮ ಪಂಚಾಯತ್ ಹಾಗೂ...

ಕೇಮಾರು: ಶಾಲಾ ವಾರ್ಷಿಕೋತ್ಸವ ಸಮಾರಂಭ

ಮೂಡುಬಿದಿರೆ : ಕೇಮಾರು ದ.ಕ.ಜಿ.ಪಂ‌‌ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ವಿಜೃಂಭಣೆಯಿಂದ...

ಶಾಲಾಡಳಿತವು ಶಿಕ್ಷಣದೊಂದಿಗೆ ಕೈ ಜೋಡಿಸಿದಾಗ ಯಶಸ್ಸು ಸಾಧ್ಯ: ಶಶಿಧರ್ ಡಿ. ಡಿ. ಪಿ. ಐ.

ಉಳ್ಳಾಲ: ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ...