ಡಿ.25: ಸಾವಿರ ಕಂಬದ ಬಸದಿಯಲ್ಲಿ ಲಕ್ಷ ದೀಪೋತ್ಸವ

Date:

ಮೂಡುಬಿದಿರೆ: ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ವಿಶ್ವಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಡಿಸೆಂಬರ್ 25 ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮವು ಅತ್ಯಂತ ಸಡಗರದ ಜರುಗಲಿದೆ.​ ಅತಿಶಯ ಸಿದ್ಧಕ್ಷೇತ್ರವಾದ ಮೂಡುಬಿದಿರೆಯ ಈ ಪುಣ್ಯಕ್ಷೇತ್ರದಲ್ಲಿ ಅಂದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟಿವೆ.​

ಸಂಜೆ 6 ರಿಂದ: ವಿವಿಧ ಭಜನಾ ತಂಡಗಳಿಂದ ಭಕ್ತಿ ಸುಧೆ – ಜಿನ ಭಜನಾ ಕಾರ್ಯಕ್ರಮ, 6:35ಕ್ಕೆ: ಭಗವಂತನಿಗೆ ಪವಿತ್ರ ಪಂಚಾಮೃತ ಅಭಿಷೇಕ, 7:30ರಿಂದ 8:30ರವರೆಗೆ: ಮಹಾಪುರಾಣ ವಾಚನ ಮತ್ತು ಪ್ರವಚನ, ನಿವೃತ್ತ ಅಧ್ಯಾಪಕ ಉದಯಕುಮಾರ್ ಮುದ್ದ ಅವರಿಂದ ವಾಚನ ಹಾಗೂ ಶಿವಪ್ರಕಾಶ್ ಇಜಿತೊಟ್ಟು ಅವರಿಂದ ವ್ಯಾಖ್ಯಾನ ನಡೆಯಲಿದೆ. ​ರಾತ್ರಿ 8ಕ್ಕೆ: ಸಾವಿರಾರು ಹಣತೆಗಳ ಬೆಳಕಿನಲ್ಲಿ ‘ಲಕ್ಷ ದೀಪೋತ್ಸವ’ ಹಾಗೂ ಮಹಾಮಂಗಳಾರತಿ ನೆರವೇರಲಿದೆ.​

ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಟ್ರಸ್ಟ್ ವತಿಯಿಂದ ನಡೆಯುವ ಧಾರ್ನಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಬಸದಿಗಳ ಮೊಕ್ತೇಸರರಾದ ಪಟ್ಟಶೆಟ್ಟಿ ಸುದೇಶ್ ಕುಮಾರ್, ದಿನೇಶ್ ಕುಮಾರ್ ಬೆಟ್ಕೇರಿ, ಆದರ್ಶ್ ಕೊಂಡೆ, ಹಾಗೂ‌ ಮಠದ ವ್ಯವಸ್ಥಾಪಕ ಸಂಜಯಂತ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಮನಬೆಟ್ಟುವಿನಲ್ಲಿ ಉಚಿತ ಆರೋಗ್ಯ ಮತ್ತು ನೇತ್ರಾ ಚಿಕಿತ್ಸಾ ಶಿಬಿರ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ...

ಅಣಬೆ ಕೃಷಿ ಮತ್ತು ಸಾಬೂನು ತಯಾರಿಕೆಯ ಬಗ್ಗೆ ಮಾಹಿತಿ

ಮೂಡುಬಿದಿರೆ: ರೈತ ದಿನಾಚರಣೆ ಅಂಗವಾಗಿ ತೆಂಕ ಮಿಜಾರ್ ಗ್ರಾಮ ಪಂಚಾಯತ್ ಹಾಗೂ...

ಕೇಮಾರು: ಶಾಲಾ ವಾರ್ಷಿಕೋತ್ಸವ ಸಮಾರಂಭ

ಮೂಡುಬಿದಿರೆ : ಕೇಮಾರು ದ.ಕ.ಜಿ.ಪಂ‌‌ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ವಿಜೃಂಭಣೆಯಿಂದ...

ಶಾಲಾಡಳಿತವು ಶಿಕ್ಷಣದೊಂದಿಗೆ ಕೈ ಜೋಡಿಸಿದಾಗ ಯಶಸ್ಸು ಸಾಧ್ಯ: ಶಶಿಧರ್ ಡಿ. ಡಿ. ಪಿ. ಐ.

ಉಳ್ಳಾಲ: ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ...