ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಮಂಚಿ ಕಟ್ಟೆ ಬಳಿ ಟಿಪ್ಪರ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಚಾಲಕ ಪುರುಷೋತ್ತಮ ಸಾಲ್ಯಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಸ್ಥಳೀಯರು ತಕ್ಷಣವೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



