ಉಪ್ಪಿನಂಗಡಿ: ಪ್ರಯಾಣಿಕನ ಸಮಯಪ್ರಜ್ಞೆ – ತಪ್ಪಿದ ಭಾರೀ ದೊಡ್ಡ ಅವಘಡ

Date:

ಉಪ್ಪಿನಂಗಡಿ (ಡಿ.26): ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ.

ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ನ್ಯಾಯವಾದಿ ನೆಲ್ಯಾಡಿಯ ಇಸ್ಮಾಯೀಲ್ ಅವರ ಪುತ್ರ ಸಲ್ಮಾನುಲ್‌ ಫಾರಿಸ್ ತಕ್ಷಣವೇ ಚಾಲಕನತ್ತ ದೌಡಾಯಿಸಿ ಚಲಿಸುತ್ತಿದ್ದ ಬಸ್ ಅನ್ನು ನಿಧಾನಕ್ಕೆ ಹತೋಟಿಗೆ ತಂದು ರಸ್ತೆ ಬದಿಗೆ ನಿಲ್ಲಿಸಿದರು.

ತಕ್ಷಣವೇ ಚಾಲಕನನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯವೊಂದು ತಪ್ಪಿದಂತಾಗಿದೆ. ಬಳಿಕ ಸಾರಿಗೆ ನಿಯಂತ್ರಕರ ಸಹಕಾರದಿಂದ ಬಸ್ ಅನ್ನು ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ತಂದಿಡಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...