‘ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ’: ಡಾ.ಎಂ.ಎನ್.ರಾಜೇಂದ್ರ ಕುಮಾರ್

Date:

ಎಸ್ ಸಿಡಿಸಿಸಿ ಬ್ಯಾಂಕ್ ಕ್ರೀಡಾಕೂಟ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟ ಮಂಗಳೂರು ಇದರ ಕ್ರೀಡಾಕೂಟವು ಶನಿವಾರ ಬೆಳಗ್ಗೆ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.


ಬಳಿಕ ಮಾತಾಡಿದ ಅವರು, “ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ನೌಕರರಿಗಾಗಿ ಕ್ರೀಡಾಕೂಟ ಏರ್ಪಡಿಸಿ ಅವರಲ್ಲಿ ಹುಮ್ಮಸ್ಸು ತುಂಬುವ ಕಾರ್ಯಕ್ರಮ ಶ್ಲಾಘನೀಯವಾದುದು. ಸದಾಕಾಲ ಕೆಲಸದ ಒತ್ತಡದಲ್ಲಿ ಇರುವ ನೌಕರರು ಜಂಜಡವನ್ನು ಮರೆತು ಸೌಹಾರ್ದಯುತವಾಗಿ ಇದರಲ್ಲಿ ಪಾಲ್ಗೊಳ್ಳಬೇಕು“ ಎಂದರು.


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹ ನಿರ್ದೇಶಕ ಪ್ರದೀಪ್ ಡಿಸೋಜ ಮಾತಾಡಿ, “ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಸಹಕಾರಿ ಕ್ಷೇತ್ರದಷ್ಟೇ ಕ್ರೀಡಾ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಾ ಬಂದವರು. ನೌಕರರು ಒಂದಾಗಿ ಒಂದೆಡೆ ಕಲೆತು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಖುಷಿಯ ವಿಚಾರ” ಎಂದರು.


ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಕಾರ್ಯ ನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ದೇವರಾಜ್ ರೈ, ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಳ್ಯೊಟ್ಟು, ಒಕ್ಕೂಟದ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ಜೋವಿನ್ ಪ್ರಕಾಶ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.


ಒಕ್ಕೂಟದ ಅಧ್ಯಕ್ಷ ಕರುಣಾಕರ ಅವರು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಬ್ಯಾಂಕ್ ಅಧ್ಯಕ್ಷರನ್ನು ನೌಕರರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಗೆದ್ದ ಒಕ್ಕೂಟದ ಸದಸ್ಯರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...