ಉನ್ನಾವೋ ರೇಪ್‌: ದೋಷಿ ಕುಲದೀಪ್‌ ಸೆಂಗಾರ್‌ಗೆ ಶಾಕ್‌, ಜಾಮೀನು ನೀಡಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Date:

2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಕುಲದೀಪ್ ಸೆಂಗಾರ್‌ಗೆ ನೀಡಲಾಗಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗುವುದಿಲ್ಲ, ಪ್ರಕರಣದ ಮುಂದಿನ ವಿಚಾರಣೆ ಜನವರಿಯಲ್ಲಿ ನಡೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನವದೆಹಲಿ(ಡಿ.29): ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದು, ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ತೀರ್ಪು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಪ್ರಕರಣವು “ಕಾನೂನಿನ ಗಣನೀಯ ಪ್ರಶ್ನೆಗಳನ್ನು” ಹುಟ್ಟುಹಾಕಿದೆ ಎಂದು ಹೇಳಿತು ಮತ್ತು ಈ ವಿಷಯದ ಬಗ್ಗೆ ನೋಟಿಸ್ ಕೂಡ ನೀಡಲಾಗಿದೆ. ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಿದ ಕೋರ್ಟ್‌, ಸೆಂಗಾರ್ ಜೈಲಿನಲ್ಲಿಯೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದ್ದು, ಅವರು ಈಗಾಗಲೇ ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಹೇಳಿದೆ.

ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಸೆಂಗಾರ್‌ಗೆ ನೋಟಿಸ್ ನೀಡಿದೆ. 2019 ರ ಡಿಸೆಂಬರ್‌ನಲ್ಲಿ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಅವರಿಗೆ 25 ಲಕ್ಷ ರೂ. ದಂಡವನ್ನೂ ವಿಧಿಸಿತ್ತು.

ಡಿ.23ಕ್ಕೆ ಜೀವಾವಧಿ ಶಿಕ್ಷೆ ರದ್ದು ಮಾಡಿದ್ದ ಹೈಕೋರ್ಟ್‌

ಡಿಸೆಂಬರ್ 23 ರಂದು ದೆಹಲಿ ಹೈಕೋರ್ಟ್ ಅವರ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...