ಮೇಲ್ತೆನೆಯ ಅಧ್ಯಕ್ಷರಾಗಿ ಮಂಗಳೂರ ರಿಯಾಝ್ ಆಯ್ಕೆ

Date:



ದೇರಳಕಟ್ಟೆ, ಡಿ.31: ಮೇಲ್ತೆನೆ (ಬ್ಯಾರಿ ಎಲ್ತ್‌ಕಾರ್-ಕಲಾವಿದಮಾರೊ ಕೂಟ) ದೇರಳಕಟ್ಟೆ ಇದರ ವಾರ್ಷಿಕ ಸಭೆಯು ಮಂಗಳವಾರ ಕಾಜೂರಿನ ಖಾಸಗಿ ಹೊಟೇಲಿನಲ್ಲಿ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷ ಇಬ್ರಾಹೀಂ ನಡುಪದವು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್ ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿದರು. ಸಭೆಯಲ್ಲಿ 2026ನೆ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಆಲಿಕುಂಞಿ ಪಾರೆ ಪುನರಾಯ್ಕೆಗೊಂಡರು. ಅಧ್ಯಕ್ಷರಾಗಿ ಮಂಗಳೂರ ರಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಮಲಾರ್, ಉಪಾಧ್ಯಕ್ಷರಾಗಿ ಇಬ್ರಾಹಿಂ ಮುದುಂಗಾರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸಿ.ಎಂ ಶರೀಫ್ ಪಟ್ಟೋರಿ, ಕೋಶಾಧಿಕಾರಿಯಾಗಿ ವಿ. ಇಬ್ರಾಹೀಂ ನಡುಪದವು ಆಯ್ಕೆಯಾದರು.

ಸದಸ್ಯರಾಗಿ ಟಿ. ಇಸ್ಮಾಯಿಲ್ ಮಾಸ್ಟರ್, ಯೂಸುಫ್ ವಕ್ತಾರ್, ಬಶೀರ್ ಅಹ್ಮದ್ ಕಿನ್ಯ, ಮುಹಮ್ಮದ್ ಬಾಷಾ ನಾಟೆಕಲ್, ಬಶೀರ್ ಕಲ್ಕಟ್ಟ, ಅಶೀರುದ್ದೀನ್ ಸಾರ್ತಬೈಲ್, ಬಿ.ಎಂ. ಕಿನ್ಯ, ಅಬೂಬಕರ್ ಹೂಹಾಕುವ ಕಲ್ಲು, ಮನ್ಸೂರ್ ಅಹ್ಮದ್ ಸಾಮಣಿಗೆ, ಅಶ್ರಫ್ ಡಿ.ಎ. ದೇರ್ಲಕಟ್ಟೆ, ಸಿದ್ದೀಕ್ ಎಸ್. ರಾಝ್, ಆಸೀಫ್ ಬಬ್ಬುಕಟ್ಟೆ, ರಫೀಕ್ ಕಲ್ಕಟ್ಟ, ಹೈದರ್ ಆಲಡ್ಕ ಆಯ್ಕೆಯಾದರು. ಆರು ವರ್ಷದ ಹಿಂದೆ ಆರಂಭಿಸಲಾಗಿದ್ದ ಮೇಲ್ತೆನೆ ಇ-ಪೇಪರ್ ಅನ್ನು ಹಂಝ ಮಲಾರ್ ಮತ್ತು ಬಶೀರ್ ಅಹ್ಮದ್ ಕಿನ್ಯ ಅವರ ಸಂಪಾದಕತ್ವದಲ್ಲಿ ಪುನಃ ಹೊರತರಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...