ದಕ್ಷಿಣ ಕನ್ನಡದಲ್ಲಿ ಅದ್ದೂರಿ ಕುರ್‌ಆನ್ ಪಠಣ ಸ್ಪರ್ಧೆ: ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಂದ ಪೋಸ್ಟರ್ ಬಿಡುಗಡೆ

Date:


​ಮಂಗಳೂರು: ಕಳೆದ ಹತ್ತು ವರ್ಷಗಳಿಂದ ಸಮಾಜದ ಹಿತಕ್ಕಾಗಿ ಶ್ರಮಿಸುತ್ತಿರುವ ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ತನ್ನ 10ನೇ ವರ್ಷದ ಸಂಭ್ರಮದಲ್ಲಿದೆ. ಈ ಸುಸಂದರ್ಭದ ಅಂಗವಾಗಿ ಜಿಲ್ಲೆಯಲ್ಲೇ ಹಿಂದೆಂದೂ ಕಂಡಿರದ ರೀತಿಯಲ್ಲಿ ಬೃಹತ್ ‘ಕಿರಾತ್’ ಸೀಸನ್-4 (ಕುರ್‌ಆನ್ ಪಠಣ) ಸ್ಪರ್ಧೆಯನ್ನು2026ರ ಜನವರಿ 28ರ ಬುಧವಾರದಂದು ಮಂಗಳೂರಿನ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ವಿಶೇಷ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಅನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಡಾ. ಯು.ಟಿ. ಖಾದರ್ ಅವರು ದಿನಾಂಕ 01/01/2025 ರಂದು ಅನಾವರಣಗೊಳಿಸಿದರು.


ಈ ಸ್ಪರ್ಧೆಯ ಮೊದಲ ಮೂರು ಸೀಸನ್‌ಗಳು ಸೌದಿ ಅರೇಬಿಯಾದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದಿದ್ದವು. ಇದೀಗ ನಾಲ್ಕನೇ ಸೀಸನ್ ಅನ್ನು ನಮ್ಮ ಮಂಗಳೂರಿನಲ್ಲಿ ಆಯೋಜಿಸಲು ಟ್ರಸ್ಟ್ ನಿರ್ಧರಿಸಿದೆ. ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಡಾ. ಯು.ಟಿ. ಖಾದರ್ ಅವರು, ಟ್ರಸ್ಟ್‌ನ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಗಳನ್ನು ಶ್ಲಾಘಿಸಿ, ಕಾರ್ಯಕ್ರಮಕ್ಕೆ ಪೂರ್ಣ ಯಶಸ್ಸು ಸಿಗಲಿ ಎಂದು ಹಾರೈಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...