ಕರಾಟೆ ಸ್ಪರ್ಧೆಯಲ್ಲಿ ಸೋದರ, ಸೋದರಿಗೆ ಗೆಲುವಿನ ಗರಿ

Date:

ಕಾಸರಗೋಡು : ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ನೇತೃತ್ವದಲ್ಲಿ ಇತ್ತೀಚಿಗೆ ಮಂಗಳೂರಿನಲ್ಲಿ ಜರಗಿದ ಅಖಿಲ ಭಾರತ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಸಹೋದರ, ಸಹೋದರಿಗೆ ಬಹುಮಾನದ ಮೆರಗು.
ಸ್ಪರ್ಧೆಯಲ್ಲಿ ಪಾಲ್ಗೊಂಡ ಕುಂಬಳೆ ಸೂರಂಬೈಲುವಿನ ಕುಳ ನಿವಾಸಿ ಶ್ವೇತಾ ಹೊಳ್ಳ ಅವರು 17 ವರ್ಷದೊಳಗಿನವರ ಕುಮಿಟೆ ಬ್ರೌನ್ ಬೆಲ್ಟ್ ವಿಭಾಗದಲ್ಲಿ ದ್ವಿತೀಯ ಹಾಗೂ ಕಟ ವಿಭಾಗದಲ್ಲಿ ತೃತೀಯ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಈಕೆಯ ಸಹೋದರ ತೇಜಸ್ ಹೊಳ್ಳ 12 ವರ್ಷದೊಳಗಿನ ವಿಭಾಗ ಕಟದಲ್ಲಿ ಭಾಗವಹಿಸಿ ತೃತೀಯ ಕಂಚಿನ ಪದಕ ಬಹುಮಾನವನ್ನು ಮುಡಿಗೇರಿಸಿದ್ದಾನೆ. ಎರಡು ಸಾವಿರಕ್ಕೂ ಅಧಿಕ ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.


ಶ್ವೇತಾ ಹೊಳ್ಳ ಅವರು ಕುಂಬಳೆ ಸರಕಾರಿ ಉನ್ನತ ಪ್ರೌಢ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿನಿ ಹಾಗೂ ತೇಜಸ್ ಹೊಳ್ಳ ಬೇಳ ಸಂತ ಬಾರ್ತಲೋಮಿಯಸ್ ಎ.ಎಸ್.ಬಿ ಶಾಲೆಯ ಏಳನೇ ತರಗತಿ ವಿದ್ಯಾರ್ಥಿಯಾಗಿದ್ದು, ಕುಳ ನಿವಾಸಿ, ಎಡನಾಡು ಸಹಕಾರಿ ಕ್ಷೀರೋತ್ಪಾದಕ ಸಹಕಾರಿ ಸಂಘದ ನೌಕರ, ಹವ್ಯಾಸಿ ಯಕ್ಷಗಾನ ಕಲಾವಿದ ರಾಮಚಂದ್ರ ಹೊಳ್ಳ – ಶೈಲಜಾ ದಂಪತಿಯ ಮಕ್ಕಳಾಗಿದ್ದಾರೆ. ಕರಾಟೆ ಶಿಕ್ಷಕ ಹರಿವೆಂಕಟೇಶ ಶರ್ಮ ಅವರಿಂದ ಕರಾಟೆ ಅಭ್ಯಸಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...