ಮದೀನಾ ಬಳಿ ಭೀಕರ ರಸ್ತೆ ಅಪಘಾತ: ಕೇರಳದ ಒಂದೇ ಕುಟುಂಬದ ನಾಲ್ವರು ಮೃತ್ಯು

Date:


 

ಸೌದಿ ಅರೇಬಿಯಾ: ಮದೀನಾ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಮೂಲದ ಮಲಯಾಳಿ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿದ್ದಾರೆ. ಜಿದ್ದಾದಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ಜಲೀಲ್ ಹಾಗೂ ಅವರ ಕುಟುಂಬ ಮದೀನಾಕ್ಕೆ ಪ್ರವಾಸಕ್ಕಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮೃತರನ್ನು ಮಂಜೇರಿ ವೆಲ್ಲಿಲ ನಿವಾಸಿ ಅಬ್ದುಲ್ ಜಲೀಲ್ (52), ಅವರ ಪತ್ನಿ ತಸ್ನಾ ತೋಡೆಂಗಲ್ (40), ಪುತ್ರ ಆದಿಲ್ (14) ಮತ್ತು ಜಲೀಲ್ ಅವರ ತಾಯಿ ಮೈಮುನಾಥ್ ಕಕ್ಕೆಂಗಲ್ (73) ಎಂದು ಗುರುತಿಸಲಾಗಿದೆ. ಕುಟುಂಬ ಪ್ರಯಾಣಿಸುತ್ತಿದ್ದ ಜಿಎಂಸಿ ವಾಹನದಲ್ಲಿ ಒಟ್ಟು ಏಳು ಮಂದಿ ಇದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಜಲೀಲ್ ಅವರ ಇತರ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರಿ ಆಯಿಷಾ (15) ಮದೀನಾದ ಕಿಂಗ್ ಫಹದ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು, ಹಾದಿಯಾ (9) ಮತ್ತು ನೂರಾ (7) ಅವರನ್ನು ಸೌದಿ ಜರ್ಮನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳೀಯ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ದುರ್ಘಟನೆ ಕುಟುಂಬದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...