ಸುಳ್ಯದ ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ; ಸಾವಿನಲ್ಲಿ ಸಂಶಯ..!

Date:

ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಯುವತಿ ತಾಯಿ ದೂರು ನೀಡಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಯತೀಶ್ ಆರ್ವಾರ್ ಅವರ ಸೋದರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಮತ್ತು ಆಕೆಯ ಪುತ್ರಿ ಧೃತಿ (3) ಮೃತಪಟ್ಟವರು. ಮಧುಶ್ರೀ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ರುಕ್ಮಯ್ಯ ಗೌಡ ಹಾಗೂ ರತ್ನಾವತಿ ದಂಪತಿಯ ಪುತ್ರಿ.

ಸ್ಥಳೀಯರ ಮಾಹಿತಿ ಪ್ರಕಾರ, ಶನಿವಾರ ರಾತ್ರಿ ಎಲ್ಲರೊಂದಿಗೆ ಮಧುಶ್ರೀ ಊಟ ಮುಗಿಸಿ ಮಲಗಿದ್ದರು. ಬೆಳಗ್ಗೆ ನೋಡಿದಾಗ ತಾಯಿ, ಮಗು ಇರಲಿಲ್ಲ. ಮನೆಯವರು ಹುಡುಕಾಡಿದಾಗ ಇಬ್ಬರ ಶವಗಳು ಬಾವಿಯಲ್ಲಿ ಪತ್ತೆಯಾಗಿವೆ. ಎಲ್ಲರೂ ನಿದ್ದೆಯಲ್ಲಿದ್ದಾಗ ಈಕೆ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ಇದೆ.

ಮಗಳ ಸಾವಿನ ಬಗ್ಗೆ ಹೆತ್ತವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು ಬೆಳ್ಳಾರೆ ಪೊಲೀಸರು ಮನೆಯವರನ್ನು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...