ಕಾಜೂರು ಮಖಾಂ ಉರೂಸ್ ಜ16ರಿಂದ 25ರ ವರೆಗೆ

Date:

ಬೆಳ್ತಂಗಡಿ: ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಕಾಜೂರು ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಉಸ್ತಾದ್ ಅಧ್ಯಕ್ಷತೆಯಲ್ಲಿ ಉರೂಸ್ ಕಾರ್ಯಕ್ರಮವು ನಡೆಯಲಿದೆ.

ಕಾರ್ಯಕ್ರಮವನ್ನು ಜನವರಿ 16ರಂದು ಕೆಪಿಎಸ್ ಝೈನುಲ್ ಆಬಿದೀನ್ ಜಮಾಲುಲ್ಲೈಲ್ ತಂಙಳ್ ಕಾಜೂರು ಉದ್ಘಾಟಿಸಲಿದ್ದಾರೆ, ಜನವರಿ 18ರಂದು ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ನೇತೃತ್ವದಲ್ಲಿ ಮದನೀಯಂ ಮಜ್ಲಿಸ್, ಜನವರಿ 21ರಂದು ಪೆರುಮುಗಂ ಅಶ್ರಫ್ ಉಸ್ತಾದ್ ಮತ್ತು ತಂಡದಿಂದ ಕಥಾ ಪ್ರಸಂಗ ನಡೆಯಲಿದೆ.


ಜನವರಿ 21ರಂದು ನಡೆಯುವ ಬೃಹತ್ ದಿಕ್ರ್ ಹಲ್ಕಾ ಕಾರ್ಯಕ್ರಮ ಅಸ್ಸೈಯದ್ ಬಾಯಾರ್ ತಂಙಳ್ ನೇತೃತ್ವದಲ್ಲಿ ನಡೆಯಲಿದೆ. ಜನವರಿ 23ರಂದು ಸಂಜೆ ರಹ್ಮಾನಿಯ ಮಹಿಳಾ ಶರೀಅತ್ ಕಾಲೇಜು ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಸಮಾರಂಭ ನಡೆಯಲಿದೆ.

ಜನವರಿ 25ರಂದು ಬೆಳಿಗ್ಗೆ ಕುಂಬೋಳ್ ಆಟಕೋಯ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಖತಮುಲ್ ಖುರಾನ್ ಮಜ್ಲಿಸ್ ನಡೆಯಲಿದ್ದು ಸಂಜೆ ನಡೆಯುವ ಉರೂಸ್ ಸಮಾರೋಪ ಸಮಾರಂಭದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್, ಝೈನುಲ್ ಉಲಮಾ ಮಾಣಿ ಉಸ್ತಾದ್ ಸೇರಿದಂತೆ ವಿವಿಧ ಧಾರ್ಮಿಕ, ಸಾಮಾಜಿಕ, ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...