ಉಳ್ಳಾಲ: ಚಿಕಿತ್ಸೆ ಫಲಿಸದೆ ಗಾಯಾಳು ಮೃತ್ಯು

Date:

ಉಳ್ಳಾಲ: ಕಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ಮೃತ ವ್ಯಕ್ತಿಯನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪಾಡಿ (24) ಎಂದು ಗುರುತಿಸಲಾಗಿದೆ.

ಘಟನೆ ವಿವರ: ಅಹ್ಮದ್ ಹಾಶೀರ್ ಹಾಗೂ ಮುಹಮ್ಮದ್ ಮಹಾಝ್ ಜ.5 ರಂದು ಸೋಮವಾರ ರಾತ್ರಿ ಮಂಗಳೂರಿನಲ್ಲಿ ಕ್ಯಾಟರಿಂಗ್ ಕೇಲಸ ಮುಗಿಸಿ ಸ್ಕೂಟರ್ ನಲ್ಲಿ ಊರಿಗೆ ಮರಳುತ್ತಿದ್ದರು. ಈ ವೇಳೆ ಬೀರಿ ಬಳಿ ಸ್ಕೂಟರ್ ತಲಪಾಡಿ ಕಡೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಆಗಿದೆ.

ಇದರಿಂದ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...